Read - < 1 minute
ಬೆಂಗಳೂರು, ಆ.31: ಅಮೆರಿಕಾದಲ್ಲಿ ನಡೆಯಲಿರುವ ಅಕ್ಕ ಸಮ್ಮೇಳನದಲ್ಲಿ ದಲಿತ ಕಲಾವಿದರಿಗೆ ಪಾಲ್ಗೊಳ್ಳಲು ಅವಕಾಶ ಸಿಗದೆ ಇರುವ ಹಿನ್ನೆಲೆಯಲ್ಲಿ ತಾವು ಕೂಡ ಸಮ್ಮೇಳನದಲ್ಲಿ ಭಾಗವಹಿಸದಿರಲು ಸಮಾಜ ಕಲ್ಯಾಣ ಸಚಿವ ಹೆಚ್. ಆಂಜನೇಯ ನಿರ್ಧರಿಸಿರುವುದು ತಿಳಿದುಬಂದಿದೆ.
ದಲಿತ ಕಲಾವಿದರಿಗೆ ಅಕ್ಕ ಸಮ್ಮೇಳನದಲ್ಲಿ ಭಾಗವಹಿಸಲು ಅವಕಾಶ ನೀಡಿಲ್ಲ. ಹೀಗಾಗಿ ತಾವು ಭಾಗವಹಿಸುವುದರಲ್ಲಿ ಅರ್ಥವಿಲ್ಲ ಎಂದು ಅವರ ಸಮೀಪ ವರ್ತಿಗಳ ಬಳಿ ಹೇಳಿಕೊಂಡಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಈ ವಿಷಯದಲ್ಲಿ ಹೆಚ್ಚಿನ ಮುತುವರ್ಜಿ ವಹಿಸಿ ದಲಿತ ಕಲಾವಿದರು ಅಕ್ಕ ಸಮ್ಮೇಳನದಲ್ಲಿ ಭಾಗವಹಿಸಲು ಅನುಕೂಲ ಮಾಡಿಕೊಡಬೇಕಾಗಿತ್ತು. ಆದರೆ ಈ ಕುರಿತು ಸ್ವಲ್ಪ ತಡವಾದ್ದರಿಂದ ದಲಿತ ಕಲಾವಿದರಿಗೆ ಭಾಗವಹಿಸಲು ಸಾಧ್ಯವಾಗದಂತಾಯಿತು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದೇ ಕಾರಣಕ್ಕಾಗಿ ಮುಂದಿನ ವರ್ಷ ತಾವೇ ಮುಂದೆ ನಿಂತು ದಲಿತ ಕಲಾವಿದರಿಗೆ ವೀಸಾ ಸಿಗುವಂತೆ ವ್ಯವಸ್ಥೆ ಮಾಡುತ್ತೇನೆ. ಅಮೆರಿಕದಲ್ಲಿ ನಡೆಯುವ ಅಕ್ಕ ಸಮ್ಮೇಳನಕ್ಕೆ ಈ ವರ್ಷ ಹೋಗದೆ ಮುಂದಿನ ವರ್ಷ ಹೋಗುತ್ತೇನೆ ಎಂದು ಹೇಳಿದ್ದಾರೆ.
Discussion about this post