ಈ ಕುರಿತಂತೆ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದ್ದು, ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇವರನ್ನು ಬಂಧಿಸಲಾಗಿದೆ ಎನ್ನಲಾಗಿದೆ.
ಕಳೆದ ತಿಂಗಳು ದೆಹಲಿ ಏಮ್ಸ್ ಕಾಲೇಜು ಆವರಣದಲ್ಲಿ ನಡೆದ ಪ್ರತಿಭಟನೆ ವೇಳೆ ಸೋಮನಾಥ್ ಭಾರ್ತಿ ಮತ್ತು ಅವರ ಸಂಗಡಿಗರು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದರು ಎಂಬ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಇದೇ ಗಲಾಟೆ ಸಂಬಂಧ ೩ ವಾರಗಳ ಹಿಂದೆಯೇ ಸೋಮನಾಥ್ ಭಾರ್ತಿ ವಿರುದ್ಧ ದೆಹಲಿಯ ಹೌಜ್ ಖಾಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ಕೂಡ ದಾಖಲಾಗಿತ್ತು.
ಇಂದು ಸೋಮನಾಥ್ ಭಾರ್ತಿ ಅವರನ್ನು ಹೌಜ್ ಖಾಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ.
Discussion about this post