Read - < 1 minute
ಬೆಂಗಳೂರು: ಸೆ:10: ಕಾವೇರಿ ಸಮಸ್ಯೆಯನ್ನು ನಿರ್ವಹಣೆ ಮಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದ್ದು, ಇಂದಿನ ಬಿಕ್ಕಟ್ಟು ಸೃಷ್ಟಿಯಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದರು.
ಪಕ್ಷದ ಕಚೇರಿಯಲ್ಲಿ ನಡೆದ ಹಿಂದುಳಿದ ವರ್ಗ ಮೋಚರ್ಾದ ರಾಜ್ಯ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಸುಪ್ರೀಂಕೋಟರ್್ಗೆ ಅಫಿಡೆವಿಟ್ ಸಲ್ಲಿಸುವ ವೇಳೆ ತಮಿಳುನಾಡಿಗೆ ಪ್ರತಿ ನಿತ್ಯ 10 ಸಾವಿರ ಕ್ಯೂಸೆಕ್ಸ್ ನೀರು ಬಿಡುವುದಾಗಿ ಸಕರ್ಾರವೇ ಒಪ್ಪಿಕೊಂಡಿದೆ. ಈಗ ಮುಖ್ಯಮಂತ್ರಿ ಮೇಲೆ ಜಲಸಂಪನ್ಮೂಲ ಸಚಿವರು, ಜಲಸಚಿವರ ಮೇಲೆ ಮುಖ್ಯಮಂತ್ರಿಗಳು ಪರಸ್ಪರ ಟೀಕೆ ಮಾಡುತ್ತಿದ್ದಾರೆ. ಸಕರ್ಾರದ ತಪ್ಪು ನಿಧರ್ಾರದಿಂದಾಗಿಯೇ ನೀರು ಬಿಡುವ ದುಸ್ಥಿತಿ ಉದ್ಭವವಾಗಿದೆ ಎಂದು ಕಿಡಿಕಾರಿದರು.
ತಮಿಳನಾಡು ಸಕರ್ಾರ ಸುಪ್ರೀಂಕೋಟರ್್ಗೆ ವಿಶೇಷ ಮೇಲ್ಮನವಿ ಸಲ್ಲಿಸುವಾಗಲೇ ರಾಜ್ಯ ಸಕರ್ಾರ ನಮ್ಮ ಜಲಾಶಯಗಳಲ್ಲಿ ಎಷ್ಟು ನೀರು ಸಂಗ್ರಹವಾಗಿದೆ, ಕುಡಿಯುವ ನೀರಿನ ಲಭ್ಯತೆ, ಕೃಷಿ ಚಟುವಟಿಕೆಗಳಿಗೆ ಅವಶ್ಯಕತೆಯನ್ನು ಅಂಕಿಅಂಶಗಳೊಂದಿಗೆ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಬೇಕಿತ್ತು. ಯಾವುದೇ ಮುಂಜಾಗ್ರತೆ ಕೈಗೊಳ್ಳದ ಕಾರಣ ಕೋಟರ್್ನಲ್ಲಿ ನಮಗೆ ಹಿನ್ನಡೆಯಾಗಿದೆ ಎಂದು ಆರೋಪಿಸಿದರು.
ಸಂಪೂರ್ಣ ವಿಫಲ: ರಾಜ್ಯದಲ್ಲಿ ಭೀಕರ ಬರಗಾಲ ತಾಂಡವಾಡುತ್ತಿದ್ದು ಕುಡಿಯುವ ನೀರಿನ ಸಮಸ್ಯೆಯಿದೆ. ಮುಖ್ಯಮಂತ್ರಿ, ಜಲಸಂಪನ್ಮೂಲ ಮತ್ತು ಕೃಷಿ ಸಚಿವರು ಯಾರೊಬ್ಬರೂ ಈ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ದೂರಿದರು.
ಕಳೆದ ಬಾರಿಯಂತೆ ರಾಜ್ಯದ 130 ಹೆಚ್ಚು ತಾಲ್ಲೂಕುಗಳಲ್ಲಿ ಬರಗಾಲ ಆವರಿಸಿದೆ. ಅನೇಕ ಕಡೆ ಜನಜಾನುವಾರುಗಳಿಗೆ ಕುಡಿಯಲು ನೀರಿಲ್ಲದೆ ಪರಿತಪಿಸುವಂತಾಗಿದೆ. ಜಲಾಶಯಗಳೆಲ್ಲ ಖಾಲಿಯಾಗುತ್ತಿದ್ದರೂ ಸಕರ್ಾರ ಮಾತ್ರ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮಿಷನ್ 150:
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ 150 ಸ್ಥಾನಗಳಲ್ಲಿ ಗೆದ್ದು ದಾಖಲೆ ನಿಮರ್ಿಸಬೇಕೆಂದು ಪ್ರಧಾನಿ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ಷಾ ಸೂಚನೆ ಕೊಟ್ಟಿದ್ದಾರೆ. ಅವರ ನಿರೀಕ್ಷೆ ಹುಸಿಗೊಳಿಸದಂತೆ ಕಾರ್ಯಕರ್ತರು ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.
ಹಿಂದುಳಿದ ವರ್ಗಗಳಿರುವುದು ಕೇವಲ ಮತ ಪಡೆಯುವದಕ್ಕಲ್ಲ ಅವರ ಸವರ್ೋತೋಮುಖ ಕಲ್ಯಾಣಕ್ಕಾಗಿ ಶ್ರಮಿಸಬೇಕು ಎಂದು ಯಡಿಯೂರಪ್ಪ ಹೇಳಿದರು.
ಹಿಂದುಳಿದ ವರ್ಗಗಳ ಮೋಚರ್ಾದ ರಾಜ್ಯಾಧ್ಯಕ್ಷ ಪುಟ್ಟಸ್ವಾಮಿ ಮಾತನಾಡಿ, ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಹಿಂದುಳಿದ ವರ್ಗಕ್ಕೆ ಸಾಕಷ್ಟು ಹಣ ನೀಡಿದ್ದರು. ಈಗಿನ ಮುಖ್ಯಮಂತ್ರಿ ನಾನು ಅಹಿಂದ ಎಂದು ಹೇಳಿಕೊಳ್ಳತ್ತಾ ಹಿಂದುಳಿದವರನ್ನು ಮತ ಬ್ಯಾಂಕ್ಗೆ ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ನ.27ರಂದು ಬೆಂಗಳೂರಿನಲ್ಲಿ ಹಿಂದುಳಿದ ವರ್ಗಗಳ ಮೋಚರ್ಾ ಸಮಾವೇಶ ನಡೆಯಲಿದ್ದು , ಮೂರು ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರನ್ನು ಸೇರಿಸುವ ಮೂಲಕ ದಾಖಲೆ ನಿಮರ್ಿಸಲಾಗುವುದು ಎಂದರು.
ಸಮಾರಂಭದಲ್ಲಿ ಸಂಸದ ಮೋಹನ್, ಮಾಜಿ ಸಚಿವರಾದ ಅರವಿಂದ್ ಲಿಂಬಾವಳಿ, ಹರತಾಳ್ ಹಾಲಪ್ಪ ಸೇರಿದಂತೆ ಮತ್ತಿತರರು ಇದ್ದರು.
Discussion about this post