Read - < 1 minute
ಶ್ರೀನಗರ:ಸೆ-10:ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಕಲ್ಲುತೂರಾಟದಲ್ಲಿ ತೊಡಗಿದ್ದ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಸೈನಿಕರು ನಡೆಸಿದ ದಾಳಿಯಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.
ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಬೊಟೆಂಗೂ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿಗಳ ಮೇಲೆ ಕಲ್ಲು ತೂರಾಟದಲ್ಲಿ ತೊಡಗಿದ್ದ ಯುವಕರನ್ನು ನಿಯಂತ್ರಿಸಲು ಸೈನಿಕರು ಪೆಲ್ಲೆಟ್ ಗನ್ ಬಳಕೆ ಮಾಡಿದ್ದಾರೆ. ಈ ವೇಳೆ ಓರ್ವ ಪ್ರತಿಭಟನಾಕಾರ ಸಾವನ್ನಪ್ಪಿದ್ದಾನೆ.
ಮೃತ ಯುವಕನನ್ನು 23 ವರ್ಷದ ಯಾವರ್ ಭಟ್ ಎಂದು ಗುರುತಿಸಲಾಗಿದೆ. ಈ ಹಿಂದೆಯಷ್ಟೇ ಕೇಂದ್ರ ಸಕರ್ಾರ ಪೆಲ್ಲೆಟ್ ಗನ್ ಗಳಿಗೆ ಪಯರ್ಾಯ ವ್ಯವಸ್ಥೆ ಮಾಡುವುದಾಗಿ ಘೋಷಣೆ ಮಾಡಿತ್ತು. ಆದರೆ ಪಯರ್ಾಯ ವ್ಯವಸ್ಥೆಯಾಗುವುದರೊಳಗೆ ಮತ್ತೆ ಪೆಲ್ಲೆಟ್ ಗನ್ ಗೆ ಓರ್ವ ವ್ಯಕ್ತಿ ಸಾವನ್ನಪ್ಪಿರುವುದು ದುರಂತ.
ಇನ್ನು ಶೋಪಿಯಾನ್ ನಲ್ಲಿ ನಡೆದ ಮತ್ತೊಂದು ಪ್ರಕರಣದಲ್ಲಿ ಉದ್ರಿಕ್ತರನ್ನು ನಿಯಂತ್ರಿಸಲು ಅಶ್ರುವಾಯು ಪ್ರಯೋಗಿಸಿದಾಗ 25 ವರ್ಷದ ಸಾಯರ್ ಅಹ್ಮದ್ ಶೇಖ್ ಎಂಬಾತ ಮೃತಪಟ್ಟಿದ್ದಾನೆ. ಅಶ್ರುವಾಯು ಹೊಗೆಯಿಂದಾಗಿ ಅಸ್ವಸ್ಥನಾಗಿದ್ದ ಶೇಖ್ ನನ್ನು ಕೂಡಲೇ ಆಸ್ಪತ್ರೆಗೆ ದಾಖಲಾಯಿಸಲಾಯಿತಾದರೂ, ಅಷ್ಟು ಹೊತ್ತಿಗಾಗಲೇ ಆತ ಸಾವನ್ನಪ್ಪಿದ್ದ ಎಂದು ವೈದ್ಯರು ತಿಳಿಸಿದ್ದಾರೆ.
ನಿಷೇಧಾಜ್ಞೆ ತೆರವಿನ ಬಳಿಕ ತಾತ್ಕಾಲಿಕವಾಗಿ ಶಾಂತವಾಗಿದ್ದ ಕಾಶ್ಮೀರದಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಮತ್ತೆ ಗಲಭೆ ಉಲ್ಬಣವಾಗಿದ್ದು, ಹಿಂಸಾಚಾರ ಭುಗಿಲೇಳುವ ಸಾಧ್ಯತೆಯಿದೆ.
Discussion about this post