ಬೆಂಗಳೂರು: ಸೆ:25: ಮಾಜಿ ಸಚಿವ ಕೆ.ಜೆ.ಜಾರ್ಜ್ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿರುವ ಬಗ್ಗೆ ಹೆಚ್.ಡಿ.ಕುಮಾರಸ್ವಾಮಿ ಕೆಂಡಾಮಂಡಲರಾದರು. ಸಿಎಂ ಮೊನ್ನೆ ದಿಲ್ಲಿಗೆ ಹೋಗಿದ್ದು ಕಾವೇರಿ ವಿಷಯದ ಬಗ್ಗೆ ಮಾತನಾಡುವುದಕ್ಕಿಂತ ಹೆಚ್ಚಾಗಿ ಕೆ.ಜೆ.ಜಾರ್ಜ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಹೈಕಮಾಂಡ್ ನಿಂದ ಗ್ರೀನ್ ಸಿಗ್ನಲ್ ಪಡೆಯಲಿಕ್ಕೆ ಎಂದು ಅಸಮಧಾನ ವ್ಯಕ್ತಪಡಿಸಿದರು.
ತರಾತುರಿಯಲ್ಲಿ ಈ ಪ್ರಕರಣವನ್ನು ಮುಚ್ಚಿ ಹಾಕಲು ಸಿಐಡಿ ತನಿಖೆಗೆ ವಹಿಸಲಾಯ್ತು. ಮಾಜಿ ಗೃಹ ಸಚಿವರು ಮತ್ತು ಹಿರಿಯ ಐಪಿಎಸ್ ಅಧಿಕಾರಿಗಳ ಬಗ್ಗೆ ಅವರದೇ ಇಲಾಖೆಯ ಕಿರಿಯ ಅಧಿಕಾರಿಗಳು ಇನ್ನೆಂಥ ತನಿಖೆ ಮಾಡ್ತಾರೆ? ಅವರು ಮಾಡಿದ್ದನ್ನು ಅವರವರೇ ಅನುಭವಿಸುತ್ತಾರೆ ಬಿಡಿ ಎಂದು ಅಸಹನೆ ವ್ಯಕ್ತಪಡಿಸಿದರು.????
Discussion about this post