ಬೆಂಗಳೂರು, ಸೆ.13: ಕೇಂದ್ರ ಸರ್ಕಾರಿ ನೌಕರರಿಗೆ ಎರಡು ವರ್ಷಗಳ ಬೋನಸ್ ನೀಡುವ ಕೇಂದ್ರ ಸರ್ಕಾರದ ತೀರ್ಮಾನವನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸ್ವಾಗತಿಸಿದ್ದಾರೆ.
ಕಾರ್ಮಿಕರ ಬಹುತೇಕ ಬೇಡಿಕೆಗಳನ್ನು ಈಡೇರಿಸುವುದಾಗಿ ಕೇಂದ್ರ ಕಾರ್ಮಿಕ ಸಚಿವ ಬಂಡಾರು ದತ್ತಾತ್ರೇಯ ಮತ್ತು ವಿತ್ತ ಸಚಿವ ಅರುಣ್ ಜೇಟ್ಲಿ ಭರವಸೆ ನೀಡಿದ್ದು ಇದು ಕೇಂದ್ರ ಸರ್ಕಾರವು ಕಾರ್ಮಿಕರ ಪರವಾಗಿದೆ ಎನ್ನುವುದನ್ನು ಸೂಚಿಸುತ್ತದೆ.
ಈಗಾಗಲೇ ಕೇಂದ್ರ ಸರ್ಕಾರವು ಏಳನೇ ವೇತನ ಆಯೋಗದ ಶಿಫಾರಸಿನಂತೆ 2016-17 ನೇ ಸಾಲಿನಿಂದ ಬೋನಸ್ ನೀಡುವ ತನ್ನ ಬದ್ಧತೆಯನ್ನು ಸ್ಪಷ್ಟಪಡಿಸಿದೆ. ಇದೀಗ 2014-15 ಮತ್ತು 2015-16ನೇ ಸಾಲಿಗೆ ಬಾಕಿ ಬೋನಸ್ ಬಿಡುಗಡೆ ಮಾಡಲು ಅಧಿಸೂಚನೆ ಹೊರಡಿಸಿದ್ದು ಇದು ಕಾರ್ಮಿಕರ ಪರವಾದ ಮಹತ್ವದ ತೀರ್ಮಾನವಾಗಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಕೃಷಿಯೇತರ ಕಾರ್ಮಿಕರ ಕನಿಷ್ಠ ದಿನಗೂಲಿಯನ್ನು 246 ರೂಪಾಯಿಗಳಿಂದ 350 ರೂಪಾಯಿಗಳಿಗೆ ಹೆಚ್ಚಿಸಿರುವುದು ಕೂಡಾ ಸ್ವಾಗತಾರ್ಹ ನಿರ್ಧಾರವಾಗಿದೆ ಎಂದೂ ಅವರು ಬಣ್ಣಿಸಿದ್ದಾರೆ.
Discussion about this post