ಗದಗ, ಸೆ.20: ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ನೇತೃತ್ವದಲ್ಲಿ ಆರಂಭವಾಗಿರುವ ಸಂಗೊಳ್ಳಿರಾಯಣ್ಣ ಬ್ರಿಗೇಡ್‌ನ ಕಾರ್ಯಕ್ರಮ ಇಂದು ಗದಗದಲ್ಲಿ ನಡೆಯಿತು.
ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ
ಗದಗ ನಗರದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಈಶ್ವರಪ್ಪ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ನಗರದಲ್ಲಿ ತೆರಳಿದರು. ನೂರಾರು ಕಾರ್ಯಕರ್ತರು ಬೈಕ್ ರ‌್ಯಾಲಿ ನಡೆಸಿದರು.
ಆನಂತರ ನಡೆದ ಕಾರ್ಯಕರ್ತರ ಸಭೆಯಲ್ಲಿ ಈಶ್ವರಪ್ಪ ಮಾತನಾಡಿದರು.
Discussion about this post