Read - < 1 minute
ಮೈಸೂರು: ಸೆ:25; ಚಾಮುಂಡಿ ಬೆಟ್ಟಕ್ಕೆ ತೆರಳಿರುವ ಮಾರ್ಗಮಧ್ಯೆ ಚಿರತೆಯೊಂದು ಪ್ರತ್ಯಕ್ಷವಾಗಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ.
ಮೈಸೂರಿನ ಸಿದ್ದಾರ್ಥನಗರದ ನಿವಾಸಿ ದಿಲೀಪ್ ಹಾಗೂ ಸ್ನೇಹಿತರು ಕಾರಿನಲ್ಲಿ ಚಾಮುಂಡಿ ಬೆಟ್ಟಕ್ಕೆ ತೆರಳುವಾಗ ಮಾರ್ಗಮಧ್ಯೆ ಚಿರತೆ ಕಾಣಿಸಿಕೊಂಡಿದ್ದು , ಸುತ್ತಮುತ್ತ ವಾಸಿಸುತ್ತಿರುವ ಜನರು ಭಯಭೀತರಾಗಿದ್ದಾರೆ.
ಚಾಮುಂಡಿ ಬೆಟ್ಟಕ್ಕೆ ಹೋಗುವ ಮಾರ್ಗದಲ್ಲಿ ವೀಕ್ಷಣಾ ಗೋಪುರ ಎದುರು ಚಿರತೆ ಪ್ರತ್ಯಕ್ಷವಾಗಿದ್ದು, ರಸ್ತೆ ಪಕ್ಕದ ಕಟ್ಟೆಯ ಮೇಲೆ ಕುಳಿತಿರುವ ದೃಶ್ಯವನ್ನು ದಿಲೀಪ್ ಎಂಬುವರು ತನ್ನ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ.
ಈ ಹಿಂದೆ ಚಾಮುಂಡಿ ಬೆಟ್ಟದಲ್ಲಿ ಹಲವಾರು ಬಾರಿ ಚಿರತೆ ಕಾಣಿಸಿಕೊಂಡಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಒಂದು ವೇಳೆ ಚಾಮುಂಡಿ ಬೆಟ್ಟಕ್ಕೆ ಹೋಗುವ ಪ್ರವಾಸಿಗರ ಮೇಲೆ ದಾಳಿ ನಡೆಸಿದರೆ ಕೇಳುವವರಾರು? ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ.
Discussion about this post