ಚೆನ್ನೈ, ಅ.13: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ತೀವ್ರ ಅನಾರೋಗ್ಯಕ್ಕೆ ಒಳಗಾಗಿರುವ ಹಿನ್ನೆಲೆಯಲ್ಲಿ ಮನನೊಂದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಇಲ್ಲಿನ ಜಿಎಸ್‌ಟಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಮಾನಸಿಕವಾಗಿ ಆಘಾತಕ್ಕೊಳಗಾದ 39 ವರ್ಷದ ವ್ಯಕ್ತಿ ನಡುರಸ್ತೆಯಲ್ಲಿಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬೆಂಕಿ ಹಚ್ಚಿಕೊಂಡ ಸರ್ಗುಣಂನನ್ನು ಸ್ಥಳೀಯರು ಕೂಡಲೇ ಕ್ರೊಂಪೆಟ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಈ ವ್ಯಕ್ತಿ ಸಾಯುವ ಮುನ್ನ ಜಯಲಲಿತಾ ಅವರ ಅನಾರೋಗ್ಯದಿಂದಾಗಿ ತಾನು ತೀವ್ರವಾಗಿ ನೊಂದಿದ್ದು, ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದೆ ಎಂದು ಪೊಲೀಸರಿಗೆ ಪದೇಪದೆ ಹೇಳುತ್ತಿದ್ದ ಎನ್ನಲಾಗಿದೆ.
Discussion about this post