ಚೆನ್ನೈ, ಸೆ.23: ತೀವ್ರ ಅನಾರೋಗ್ಯಕ್ಕೆ ಈಡಾಗಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರನ್ನು ನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವಿಶೇಷ ನಿಗಾಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
68 ವರ್ಷ ಜಯಲಲಿತಾ ಅವರಿಗೆ ಪ್ರಾಥಮಿಕ ಹಂತದ ವೈದ್ಯಕೀಯ ಪರೀಕ್ಷೆಗಳು ನಡೆಸಿದ ಬಳಿಕ ವಿಶೇಷ ವಾರ್ಡ್‌ನಲ್ಲಿ ಚಿಕಿತ್ಸೆ ಮುಂದುವರಿಸಲಾಗಿರುವ ಬಗ್ಗೆ ವರದಿಯಾಗಿದೆ.
ತೀವ್ರ ಜ್ವರ ಮತ್ತು ನಿರ್ಜಲಿಕರಣ ಸಮಸ್ಯೆಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈಗ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಆಸ್ಪತ್ರೆಯ ಹೊರಗೆ ಜಯಲಲಿತಾ ಅವರ ಸಂಪುಟ ಸದಸ್ಯರು ಮತ್ತು ಅಭಿಮಾನಿಗಳು ಆಸ್ಪತ್ರೆಯ ಹೊರಗೆ ನೆರೆದಿದ್ದು, ಜಯಲಲಿತಾ ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ಆಸ್ಪತ್ರೆಯ ಸುತ್ತ ಬಿಗಿ ಭದ್ರತೆ ಒದಗಿಸಲಾಗಿದೆ.
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji
Kalpa Media House | Mysuru | Stressing the importance of dharma, Sri Mad Yadugiri Yatiraja Jeeyar Swamiji of Sri Yatiraja...
Read moreDetails













