ಚೆನ್ನೈ, ಅ.12: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅನಾರೋಗ್ಯಕ್ಕೀಡಾಗಿ ಅಪೊಲೋ ಆಸ್ಪತ್ರೆಗೆ ದಾಖಲಾಗಿರುವ ಹಿನ್ನಲೆಯಲ್ಲಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ತಮಿಳುನಾಡಿಗೆ ಭೇಟಿ ನೀಡಿ ಜಯಲಲಿತಾ ಅರೋಗ್ಯ ವಿಚಾರಿಸಿದ್ದಾರೆ ಎಂದು ತಿಳಿದುಬಂದಿದೆ.
ಚೆನ್ನೈನ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿದ ಅಮಿತ್ ಶಾ ಹಾಗೂ ಅರುಣ್ ಜೇಟ್ಲಿ, ಜಯಲಲಿತಾ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಸುಮಾರು 20 ನಿಮಿಷಗಳ ಕಾಯ ಬಿಜೆಪಿ ನಾಯಕರು ಅಸ್ಪತ್ರೆಯಲ್ಲಿದ್ದು, ವೈದ್ಯರಿಂದ ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ.
ತೀವ್ರ ಜ್ವರ ಹಾಗೂ ನಿರ್ಜಲೀಕರಣ ಸಮಸ್ಯೆ ಎದುರಿಸುತ್ತಿದ್ದ ಜಯಲಲಿತಾ ಅವರನ್ನು ಸೆ.22 ರಂದು ಚೆನ್ನೈನ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.















