ಬೆಂಗಳೂರು,ಅ.28: ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ಮುಂದಿನ ಕರ್ನಾಟಕದ ಮುಖ್ಯಮಂತ್ರಿ ಆಗಬೇಕೆಂದು ಶಾಸಕ ಮುನಿರತ್ನ ಅಭಿಪ್ರಾಯಪಟ್ಟರು.
ರಾಜ್ಯದ ಒಕ್ಕಲಿಗರ ಸಂಘದಿಂದ ನಗರದ ಹೊರವಲಯದಲ್ಲಿ ನೂತನವಾಗಿ ನಿರ್ಮಿಸಿರುವ ಕೆಂಗಲ್ ಹನುಮಂತಯ್ಯ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿ ಆಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದ ಮೂಲೆ ಮೂಲೆಗೆ ಕಾಲ್ನಡಿಗೆ ಮೂಲಕ ಪಕ್ಷದ ಸಂಘಟನೆ ಮಾಡುವ ಸಾಮಥ್ರ್ಯವಿದೆ ಎಂದು ಹೇಳಿದರು.
ಬೆಂಗಳೂರಿನಲ್ಲಿ ನಾಡಪ್ರಭು ಕೇಂಪೇಗೌಡ, ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಹೆಸರಿನಲ್ಲಿ ಇನ್ನೂ ಆಸ್ಪತ್ರೆಗಳು ಹೆಚ್ಚಾಗಬೇಕು. ಒಕ್ಕಲಿಗ ಸಮುದಾಯ ಸರ್ವರಿಗೂ ಸಹಾಯ ಮಾಡುವ ಸಮುದಾಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಒಕ್ಕಲಿಗರ ಸಂಘದ ಅಧ್ಯಕ್ಷ ಡಾ.ಅಪ್ಪಾಜಿಗೌಡ ಮಾತನಾಡಿ, ಕೆಂಗಲ್ ಹನುಮಂತಯ್ಯ ಅವರ ಹೆಸರಿನಲ್ಲಿ ಆಸ್ಪತ್ರೆ ನಿರ್ಮಾಣ ಮಾಡಲು ಡಿ.ಕೆ.ಶಿವಕುಮಾರ್ ಪ್ರೇರೆಪಿಸಿದ್ದರು ಎಂದು ಹೇಳಿದರು.
Discussion about this post