ಬೆಂಗಳೂರು, ಸೆ.17: ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಜೆ. ಜಾಜ್‌ಗೆ ಕ್ಲೀನ್‌ಚಿಟ್ ನೀಡಲಾಗಿದೆ.
ಪ್ರಕರಣದ ಕುರಿತಂತೆ ಸಿಐಡಿ ಅಧಿಕಾರಿಗಳು ಇಂದು ಮಡಿಕೇರಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದು, ಜಾರ್ಜ್ ವಿರುದ್ಧ ಕೇಳಿಬಂದ ಆರೋಪಗಳು ಸತ್ಯಕ್ಕೆ ದೂರವಾದುದು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಹಾಗೂ ಈ ಮೂವರ ವಿರುದ್ಧ ಆರೋಪಗಳಿಗೆ ಸಾಕ್ಷ್ಯಾಧಾರಗಳಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಿರುವುದಾಗಿ ಹೇಳಲಾಗಿದೆ.
ಈ ಹಿನ್ನೆಲೆಯಲ್ಲಿ ಜಾರ್ಜ್ ಹಾಗೂ ಪೊಲೀಸ್ ಅಧಿಕಾರಿ ಮೊಹಂತಿ, ಪ್ರಸಾದ್ ಅವರುಗಳಿಗೆ ಕ್ಲೀನ್‌ಚಿಟ್ ನೀಡಲಾಗಿದೆ.
ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
Discussion about this post