Read - < 1 minute
ಮೈಸೂರು, ಸೆ.20: ವಿಶ್ವವಿಖ್ಯಾತ ದಸರಾ ಕ್ರೀಡಾಕೂಟದ ವೇಳಾ ಪಟ್ಟಿಯನ್ನು ಕ್ರೀಡಾಕೂಟದ ಕಾರ್ಯಾಧ್ಯಕ್ಷ ಹಾಗೂ ಜಿಲ್ಲಾ ಎಸ್ಪಿ ರವಿ ಡಿ.ಚನ್ನಣ್ಣನವರ್ ಇಂದು ಬಿಡುಗಡೆ ಮಾಡಿದರು.
ಇಂದು ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ದಸರಾ ಕ್ರೀಡಾಕೂಟ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಈ ಬಾರಿ ದಸರಾ ಕ್ರೀಡಾಕೂಟದ ಉದ್ಘಾಟನೆಗೆ ಪ್ಯಾರಾಲಿಂಪಿಕ್ಸ್ನಲ್ಲಿ ಬೆಳ್ಳಿ ಪದಕ ಗೆದ್ದ ದೀಪಾ ಮಲ್ಲಿಕ್, ಬ್ಯಾಡ್ಮಿಂಟನ್ ಆಟಗಾರ್ತಿ ಕನ್ನಡತಿ ಅಶ್ವಿನಿಪೊನ್ನಪ್ಪ ಅವರನ್ನು ದಸರಾ ಕ್ರೀಡಾಕೂಟ ಉದ್ಘಾಟನೆಗೆ ಆಹ್ವಾನಿಸಲಾಗಿದೆ ಎಂದು ಹೇಳಿದರು.
ಅ.1ರಂದು ಸಂಜೆ 4 ಗಂಟೆಗೆ ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ದಸರಾ ಕ್ರೀಡಾಕೂಟದ ಉದ್ಘಾಟನೆ ಕಾರ್ಯಕ್ರಮ ನಡೆಯಲಿದ್ದು, ಆ.2ರಂದು ಬೆಳಗ್ಗೆ ದಸರಾ ಆಫ್ ಮ್ಯಾರಥಸ್ ಕ್ರೀಡಾ ಕೂಟ ನಡೆಯಲಿದೆ ಎಂದರು.
ಅ.4ರಂದು ಕ್ರೀಡಾಕೂಟದ ಸಮಾರೋಪ ಸಮಾರಂಭ ನಡೆಯಲಿದ್ದು, ಈ ಬಾರಿ ದಸರಾ ಕ್ರೀಡಾಕೂಟಕ್ಕೆ ಸಾಹಸ ಕ್ರೀಡೆ, ವಾಟರ್ಗೇಮ್ಸ್ ಸೇರಿದಂತೆ 22ಕ್ಕೂ ಹೆಚ್ಚು ಕ್ರೀಡೆಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಾರ್ವಜನಿಕ ಯುವ ಸಬಲೀಕರಣ ಉಪನಿರ್ದೇಶಕ ಸುರೇಶ್ ಮತ್ತಿತರರಿದ್ದರು.
Discussion about this post