ಬೆಂಗಳೂರು, ಸೆ.28: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಮತ್ತೊಮ್ಮೆ ಅನ್ಯಾಯವಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನವದೆಹಲಿಗೆ ಇಂದು ತೆರಳಿದ್ದಾರೆ.
ಕಾವೇರಿ ನೀರು ಹಂಚಿಕೆ ಕುರಿತಾಗಿ ನಿನ್ನೆ ರಾಜ್ಯಕ್ಕೆ ತದ್ವಿರುದ್ದವಾಗಿ ಸುಪ್ರೀಂ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ ಸರ್ವಪಕ್ಷ ಸಭೆಯಲ್ಲಿ ಪಾಲ್ಗೊಂಡ ಯಡಿಯೂರಪ್ಪ, ಆನಂತರ ನವದೆಹಲಿಗೆ ತೆರಳಿದ್ದಾರೆ.
ಕೇಂದ್ರ ಸಚಿವರನ್ನು ಭೇಟಿ ಮಾಡಲಿರುವ ಬಿಎಸ್‌ವೈ, ರಾಜ್ಯದಲ್ಲಿರುವ ಕಾವೇರಿ ಕೊಳ್ಳದ ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿಕೊಡಲಿದ್ದಾರೆ.
ಯಡಿಯೂರಪ್ಪ ನವದೆಹಲಿಗೆ ತೆರಳಿರುವ ಹಿನ್ನೆಲೆಯಲ್ಲಿ ಇಂದು ಹಾಗೂ ನಾಳಿನ ಎಲ್ಲ ಅವರ ಎಲ್ಲ ಕಾರ್ಯಕ್ರಮಗಳೂ ರದ್ದಾಗಿವೆ ಎಂದು ಆಪ್ತ ಮೂಲಗಳು ತಿಳಿಸಿವೆ.
Discussion about this post