Read - < 1 minute
ಬೆಂಗಳೂರು,, ಸೆ.೮: ಸುಪ್ರೀಂಕೋರ್ಟ್ ಆದೇಶದಂತೆ ತಮಿಳುನಾಡಿಗೆ ಕಾವೇರಿ ನದಿ ನೀರನ್ನು ರಾಜ್ಯ ಸರ್ಕಾರ ಹರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಕನ್ನಡಪರ ಸಂಘಟನೆಗಳು ನಾಳೆ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು, ಬಂದ್ ಯಶಸ್ವಿಯಾಗುವ ಸಾಧ್ಯತೆಗಳು ಘೋಚರಿಸಿವೆ.
ನಾಳಿನ ರಾಜ್ಯ ಬಂದ್‌ಗೆ ೧,೨೦೦ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ನಾಳೆ ಬಹುತೇಕ ಸ್ತಬ್ದವಾಗುವ ಸಾಧ್ಯತೆಯಿದ್ದು, ಬೆಳಗ್ಗೆ ೬ ಗಂಟೆಯಿಂದ, ಸಂಜೆ ೬ ಗಂಟೆಯವರೆಗೂ ಪ್ರತಿಭಟನೆಗಳು ನಡೆಯಲಿವೆ.
ಬಂದ್ ಹಿನ್ನೆಲೆಯಲ್ಲಿ ನಾಳೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕಾರ್ಮಿಕರು ಬೆಂಬಲ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ನಾಳೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಸ್ಥಗಿತಗೊಳ್ಳುವುದು ನಿಶ್ಚಿತ. ಇದರೊಂದಿಗೆ ಆಟೋ ಸಂಚಾರವೂ ಸಹ ಸ್ಥಗಿತಗೊಳ್ಳಲಿದ್ದು, ಶಾಲಾ, ಕಾಲೇಜುಗಳು, ಸರ್ಕಾರಿ ಕಚೇರಿ, ಖಾಸಗಿ ಉದ್ಯಮ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿವೆ. ನಾಳೆ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯವಾಗುವುದಿಲ್ಲ. ಹಾಲು, ಔಷಧ, ಆಂಬ್ಯುಲೆನ್ಸ್, ಆಸ್ಪತ್ರೆ ಸೇವೆಗಳು ಎಂದಿನಂತೆ ಇರಲಿವೆ.
ಹಾಗೆಯೇ ಸರ್ಕಾರಿ ಶಾಲಾ ಕಾಲೇಜುಗಳಿಗೆ ಪರಿಸ್ಥಿತಿಯನ್ನು ಅವಲೋಕಿಸಿ ರಜೆ ನೀಡುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ರಾಜ್ಯ ಸರ್ಕಾರ ಸೂಚಿಸಿದೆ.
ಇನ್ನು ಖಾಸಗಿ ಬಸ್ ಮಾಲೀಕರ ಸಂಘವೂ ರಾಜ್ಯ ಬಂದ್‌ಗೆ ಬೆಂಬಲ ಸೂಚಿಸಿದ್ದು, ಖಾಸಗಿ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.
ಕನ್ನಡ ಚಿತ್ರರಂಗ ನಾಳಿನ ಬಂದ್‌ಗೆ ಬೆಂಬಲ ಸೂಚಿಸಿದ್ದು, ಶೂಟಿಂಗ್ ಸ್ಥಗಿತಗೊಳ್ಳಿದೆ. ಇದೇ ವೇಳೆ ಸುಮಾರು ೫೩ ತಮಿಳು ಚಾನಲ್‌ಗಳನ್ನು ಶುಕ್ರವಾರ ಬಂದ್ ಮಾಡಲು ನಿರ್ಧರಿಸಿದ್ದೇವೆ ಎಂದು ಕರ್ನಾಟಕ ಕೇಬಲ್ ಆಪರೇಟರ್‌ಗಳ ಸಂಘದ ಅಧ್ಯಕ್ಷ ಪ್ಯಾಟ್ರಿಕ್ ರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Discussion about this post