ನವದೆಹಲಿ, ಅ.8: ರಾಜಕೀಯ ಪಕ್ಷಗಳಿಗೆ ಮತ್ತೊಮ್ಮೆ ಚಾಟಿ ಬೀಸಿರುವ ಕೇಂದ್ರ ಚುನಾವಣಾ ಆಯೋಗ, ಸಾರ್ವಜನಿಕರ ಹಣವನ್ನುಹಾಗೂ ಸರ್ಕಾರದ ಕಾರ್ಯತಂತ್ರಗಳನ್ನು ಯಾವುದೇ ರಾಜಕೀಯ ಪಕ್ಷಗಳು ಪ್ರಚಾರಕ್ಕಾಗಿ ಬಳಸಿಕೊಳ್ಳಬಾರದು. ಇಂತಹ ಪ್ರಯತ್ನಗಳಿಗೆ ಅವಕಾಶವಿಲ್ಲ ಎಂದು ಹೇಳಿದೆ.
ಈ ಕುರಿತಂತೆ ಚುನಾವಣಾ ಆಯೋಗ ಗುರುತಿಸಲ್ಪಟ್ಟ ರಾಷ್ಟ್ರ ಮತ್ತು ರಾಜ್ಯಗಳ ರಾಜಕೀಯ ಪಕ್ಷಗಳ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿದೆ ಈ ವಿಚಾರವನ್ನು ಸ್ಪಷ್ಟಪಡಿಸಿದೆ.
ಯಾವುದೇ ರಾಜಕೀಯ ಪಕ್ಷಗಳ ಮ್ತತು ಅವುಗಳ ಚುನಾವಣಾ ಚಿಹ್ನೆಗಳ ಪ್ರಚಾರಕ್ಕಾಗಿ ಸಾರ್ವಜನಿಕ ಸ್ಥಳ, ಹಣವನ್ನು ಬಳಸುವುದು ಉಚಿತ ಮತ್ತು ನ್ಯಾಯಯುತ ಚುನಾವಣೆ ಪರಿಕಲ್ಪನೆಗೆ ವಿರುದ್ಧವಾಗಿರುತ್ತದೆ ಎಂದಿರುವ ಆಯೋಗ, ಇದಕ್ಕೆ ವಿರುದ್ಧವಾಗಿ ನಡೆದುಕೊಂಡರೆ ಚುನಾವಣೆ ಗುರುತು(ಮೀಸಲಾತಿ ಮತ್ತು ಹಂಚುವಿಕೆ) ಆದೇಶ ೧೯೬೮ರ ೧೬ಎಯಡಿ ಕಾನೂನು ಉಲ್ಲಂಘನೆಯಾಗುತ್ತದೆ ಎಂಬ ಎಚ್ಚರಿಕೆಯನ್ನು ನೀಡಿದೆ.
ಹೀಗಾಗಿ, ಸಾರ್ವಜನಿಕರ ಹಣ, ಸ್ಥಳ ಹಾಗೂ ಸರ್ಕಾರದ ಕಾರ್ಯಗಳನ್ನು ರಾಜಕೀಯ ಪಕ್ಷಗಳು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದೆ ಎಂದು ಆಯೋಗ ಹೇಳಿದೆ.
ಉತ್ತರ ಪ್ರದೇಶದಲ್ಲಿ ಹಿಂದೆ ಅಧಿಕಾರದಲ್ಲಿದ್ದ ಮಾಯಾವತಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಬಹುಜನ ಸಮಾಜ ಪಕ್ಷದ ಚಿಹ್ನೆ ಆನೆಯ ಪ್ರತಿಮೆಯನ್ನು ರಾಜ್ಯದಾದ್ಯಂತ ಸ್ಥಾಪಿಸಿದ್ದನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು.
Discussion about this post