ಬೆಂಗಳೂರು, ಸೆ.16: ಕಾವೇರಿ ನದಿ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಆರ್ ಎಸ್ ಎಸ್ ಕೈವಾಡದ ಬಗ್ಗೆ ಅನುಮಾನವಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಕೆಪಿಸಿಸಿ ಪದಾಧಿಕಾರಿಗಳು ಸಭೆಯಲ್ಲಿ ಆಗ್ರಹಿಸಿದ್ದಾರೆ. ಹೀಗಾಗಿ ತನಿಖೆ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದರು.
ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪದಾಧಿಕಾರಿಗಳ ಸಭೆ ನಡೆದ್ದಿದ್ದು ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಗಿದೆ.
ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿ. ಪರಮೇಶ್ವರ್, ಇಂದಿನ ಕೆಪಿಸಿಸಿ ಪದಾಧಿಕಾರಿಗಳ ಸಭೆಯಲ್ಲಿ ಕಾವೇರಿ ವಿವಾದ ಕುರಿತು ಸರ್ಕಾರದ ನಿರ್ಧಾರದ ಬಗ್ಗೆ ಚರ್ಚೆಸಲಾಗಿದ್ದು, ಸರ್ಕಾರದ ನಿರ್ಧಾರಕ್ಕೆ ಕೆಪಿಸಿಸಿ ಪದಾಧಿಕಾರಿಗಳು ಸಹಮತ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.
ಹಾಗೆಯೇ ಕಾವೇರಿ ವಿವಾದ ಹಾಗೂ ಮಹಾದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ಸಿಎಂ ಜೊತೆ ಚರ್ಚೆಸಿ ಸಮಸ್ಯೆ ಬಗೆ ಹರಿಸಬೇಕು. ನ್ಯಾಯಾಧೀಕರಣದ ಹೊರಗೆ ಚರ್ಚೆ ನಡೆಸಿ ಪ್ರಧಾನಿ ನರೇಂದ್ರ ಮೋದಿ ಕಾವೇರಿ ವಿವಾದವನ್ನು ಬಗೆ ಹರಿಸಬೇಕು ಎಂದು ಪರಮೇಶ್ವರ್ ಆಗ್ರಹಿಸಿದರು.
ಕಾವೇರಿ ವಿಚಾರದಲ್ಲಿ ಬಿಜೆಪಿ ದ್ವಂದ್ವ ನಿಲುವು ಅನುಸರಿಸುತ್ತಿದ್ದು,ರಾಜಕೀಯ ಮಾಡುತ್ತಿದೆ ಎಂಬ ಅನುಮಾನ ಮೂಡಿದೆ ಎಂದು ಪರಮೇಶ್ವರ್ ತಿಳಿಸಿದರು.
Discussion about this post