ಇಸ್ಲಾಮಾಬಾದ್, ಸೆ.2: ಸರಣಿ ಬಾಂಬ್ ದಾಳಿಯಿಂದ ತತ್ತರಿಸಿ ಹೋಗಿರುವ ಪಾಕಿಸ್ಥಾನದಲ್ಲಿ ಇಂದು ಮತ್ತೊಂದು ಸ್ಫೋಟ ಸಂಭವಿಸಿದೆ. ಇಲ್ಲಿನ ಕೋರ್ಟ್ ಆವರಣದಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 15ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು 55ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.
ಖೈಬರ್ ಪಕ್ತುನ್‌ಖ್ವಾ ಪ್ರಾಂತ್ಯದ ಸೆಷನ್ಸ್ ಕೋರ್ಟ್‌ನಲ್ಲಿ ಭಯೋತ್ಪಾದಕನ ಆತ್ಮಾಹುತಿ ದಾಳಿ ನಡೆದಿದ್ದು, ಜಮಾತ್ ಉಲ್ ಅಹ್ರಾರ್( ಜೆಎ) ಉಗ್ರ ಸಂಘಟನೆ ದಾಳಿಯ ಹೊಣೆ ಹೊತ್ತಿದೆ. ಪಾಕಿಸ್ಥಾನ ಪೆಶಾವರದಲ್ಲಿ ಕ್ರಿಶ್ಚಿಯನ್ ಕಾಲೋನಿಯನ್ನು ಬಂದೂಕುಧಾರಿಯೊಬ್ಬ ದಾಳಿ ನಡೆಸಿದ ಕೆಲವೇ ಗಂಟೆಗಳಲ್ಲಿ ಕೋರ್ಟ್‌ನಲ್ಲಿ ಆತ್ಮಾಹುತಿ ದಾಳಿ ನಡೆದಿದೆ.
ಕ್ರಿಶ್ಚಿಯನ್ ಕಾಲೋನಿಯ ಮೇಲೆ ನಡೆದ ದಾಳಿಯ ಹೊಣೆಗಾರಿಕೆಯನ್ನೂ ಜಮಾತ್ ಉಲ್ ಅಹ್ರಾರ್ ಉಗ್ರ ಸಂಘಟನೆ ಹೊತ್ತಿದ್ದು, ಓರ್ವ ನಾಗರಿಕ ಹಾಗೂ ನಾಲ್ವರು ಆತ್ಮಾಹುತಿ ಭಯೋತ್ಪಾದಕರು ಮೃತಪಟ್ಟಿದ್ದಾರೆ. ಪಾಕಿಸ್ಥಾನದಲ್ಲಿ ನಡೆದಿರುವ ದಾಳಿಯಲ್ಲಿ ಲಾಯರ್‌ಗಳನ್ನು ಗುರಿಯಾಗಿರಿಸಿಕೊಂಡಿರುವುದು ಸ್ಪಷ್ಟವಾಗಿದೆ. ಇದೆ ಮಾದರಿಯಲ್ಲಿ ಕಳೆದ ತಿಂಗಳು ಪಾಕಿಸ್ಥಾನದ ಬಲೂಚಿಸ್ಥಾನ ಪ್ರಾಂತ್ಯದ ಕ್ವೆಟ್ಟಾದಲ್ಲಿಯೂ ಆತ್ಮಾಹುತಿ ದಾಳಿ ನಡೆಸಿ ೭೩ ಜನರನ್ನು ಹತ್ಯೆ ಮಾಡಲಾಗಿತ್ತು.
Discussion about this post