Read - < 1 minute
ಖ್ವೆಟ್ಟಾ, ಅ.25: ಏಷ್ಯಾಖಂಡದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಪಾಕ್ ನ ಖ್ವೆಟ್ಟಾದಲ್ಲಿ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ತರಬೇತಿ ನಿರತರಾಗಿದ್ದ 60ಕ್ಕೂ ಹೆಚ್ಚು ಪೊಲೀಸರು ಧಾರುಣವಾಗಿ ಸಾವನ್ನಪ್ಪಿದ್ದಾರೆ.
ನಿನ್ನೆ ತಡರಾತ್ರಿ 11.15ಕ್ಕೆ ಈ ದುರಂತ ಸಂಭವಿಸಿದ್ದು, ಸುಮಾರು 6 ಮಂದು ಉಗ್ರರು ಖ್ವೆಟ್ಟಾದ ಪೊಲೀಸ್ ತರಬೇತಿ ಕೇಂದ್ರದ ಮೇಲೆ ದಾಳಿ ನಡೆಸಿದ್ದಾರೆ. ಕೇಂದ್ರದ ಒಳಗೆ ನುಗ್ಗಿದ ಉಗ್ರರು ತರಬೇತಿ ನಿರತ ಪೊಲೀಸರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ.
ಈ ಕುರಿತಂತೆ ಪಾಕ್ ವಕ್ತಾರರು ಮಾಹಿತಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ದಾಳಿಯಲ್ಲಿ 118ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಗ್ರರ ವಿರುದ್ಧ ಪಾಕಿಸ್ಥಾನ ಸೇನೆ ಕಾರ್ಯಾಚರಣೆಯನ್ನು ಆರಂಭಿಸಿದ್ದು, ಪಾಕಿಸ್ತಾನ ಸೇನೆ ಹಾಗೂ ಉಗ್ರರ ನಡುವೆ ಭಾರಿ ಪ್ರಮಾಣದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ.
ದಾಳಿ ಕುರಿತಂತೆ ಮಾತನಾಡಿರುವ ಅಲ್ಲಿನ ಗೃಹ ಸಚಿವ ಸರ್ಫಾರಾಜ್ ಬುಗ್ತಿ, ಈಗ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಇಬ್ಬರು ಉಗ್ರರು ತಮ್ಮನ್ನು ತಾವೇ ಸ್ಫೋಟಿಸಿಕೊಂಡಿದ್ದಾರೆ. ಮತ್ತಷ್ಟು ಉಗ್ರರು ಅಡಗಿರುವ ಶಂಕೆಗಳಿದ್ದು, ಕಾರ್ಯಾಚರಣೆಯನ್ನು ಮುಂದುವರೆಸಲಾಗುತ್ತಿದೆ ಎಂದಿದ್ದಾರೆ.
ನಾಲ್ಕು ಮಂದಿಯಿದ್ದ ಉಗ್ರರ ಗುಂಪು ಪೊಲೀಸ್ ತರಬೇತಿ ಶಾಲೆಯ ಮೇಲೆ ದಾಳಿ ಮಾಡಿತ್ತು. ಹಾಸ್ಟೆಲ್ ಬಳಿಯಿದ್ದ ಭದ್ರತಾ ಸಿಬ್ಬಂದಿಯ ಬಳಿ ಗನ್ ಗಳನ್ನು ಕಿತ್ತುಕೊಂಡು ಹಾಸ್ಟೆಲ್ ಪ್ರವೇಶ ಮಾಡಿದ್ದಾರೆ. ಇದೀಹ ಹಾಸ್ಟೆಲ್ ಸುತ್ತಲೂ ಸೇನಾ ಪಡೆ ಸುತ್ತುವರೆದಿದ್ದು, ಕಾರ್ಯಾಚರಣೆ ನಡೆಸುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಕೊಠಡಿಗಳಲ್ಲಿ 700 ಕ್ಕೂ ಹೆಚ್ಚು ತರಬೇತಿ ನಿರತ ಪೊಲೀಸರಿದ್ದರು. ಮತ್ತಷ್ಟು ಪೊಲೀಸರನ್ನು ಉಗ್ರರು ಒತ್ತೆಯಾಳುಗಳನ್ನಾಗಿರಿಸಿಕೊಂಡಿದ್ದಾರೆ. ಇದೀಗ ಪಾಕಿಸ್ಥಾನ ಸೇನೆ ತರಬೇತಿ ಶಾಲೆಯನ್ನು ಸುತ್ತುವರೆದಿದ್ದು, ಉಗ್ರರನ್ನು ಮಟ್ಟ ಹಾಕಲು ಕಾರ್ಯಾಚರಣೆಯನ್ನು ಕೈಗೊಂಡಿದ್ದಾರೆ. ಕಾರ್ಯಾಚರಣೆ ವೇಳೆ ಪಾಕಿಸ್ಥಾನ ಸೇನೆ ಇದೀಗ ಮೂವರು ಉಗ್ರರನ್ನು ಹೊಡೆದುರುಳಿಸಿದೆ ಎಂದು ವರದಿಗಳು ತಿಳಿಸಿವೆ.
ಉಗ್ರರು ತಾಲಿಬಾನ್ ಮೂಲದವರು ಎಂದು ಹೇಳಲಾಗಿದ್ದು, ಆಫ್ಘಾನಿಸ್ಥಾನದಿಂದ ಸೂಚನೆ ಪಡೆದವರು ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ.
Discussion about this post