ಉಡುಪಿ,ಸೆ.18: ತಮ್ಮ ಲಂಗಲಗಾಮಿಲ್ಲದ ಹೇಳಿಕೆಗಳ ಮೂಲಕ ಕಾಂಗ್ರೆಸ್ ಪಕ್ಷ – ಸರ್ಕಾರದ ಮಾನ ಕಳೆಯುತ್ತಿರುವ ಮಾಜಿ ಕಾಂಗ್ರೆಸ್ ನಾಯಕ ಬಿ.ಜನಾರ್ದನ ಪೂಜಾರಿ ಅವರ ಮೇಲೆ ಕಾಂಗ್ರೆಸ್ ಹೈಕಮಾಂಡ್ ಕ್ರಮ ತೆಗೆದುಕೊಳ್ಳುವ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂ ರಾವ್ ಸೂಚನೆ ನೀಡಿದ್ದಾರೆ.
ಖಾಸಗಿ ಕಾರ್ಯಕ್ರಮದ ನಿಮಿತ್ತ ಭಾನುವಾರ ಉಡುಪಿಗೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಪೊಲೀಸ್ ಅಧಿಕಾರಿ ಎಂ.ಕೆ. ಗಣಪತಿ ಆತ್ಮಹತ್ಯೆಯ ಪ್ರಕರಣದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದ ಕೆ.ಜೆ. ಜಾರ್ಜ್ ಅವರನ್ನು ಮತ್ತೇ ಸಚಿವ ಸಂಪುಟಕ್ಕೆ ಸೇರಿಸಿಕೊಂಡರೇ ರಾಜ್ಯದಲ್ಲಿ ಕಾಂಗ್ರೆಸ್ ನಾಶವಾಗುತ್ತದೆ ಎಂದು ಜನಾರ್ದನ ಪೂಜಾರಿ ಅವರು ಮಂಗಳೂರಿನಲ್ಲಿ ಹೇಳಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ದಿನೇಶ್ ಗುಂಡೂ ರಾವ್, ಜನಾರ್ದನ ಪೂಜಾರಿ ಅವರು ಅವರು ಹಿರಿಯರು, ಅವರನ್ನು ಕಾಂಗ್ರೆಸ್ ರಾಷ್ಟ್ರಮಟ್ಟದವರೆಗೂ ಬೆಳೆಸಿದೆ, ಅವರು ಇಂತಹ ಹೇಳಿಕೆಗಳನ್ನು ಅವರು ನೀಡಬಾರದು. ಅವರು ಹೇಳಿಕೆಗಳಿಗೆ ಆಧಾರವೂ ಇಲ್ಲ ಅರ್ಥವೂ ಇರುವುದಿಲ್ಲ. ಈ ಹಿಂದೆ ಕೂಡ ಅವರು ಪಕ್ಷಕ್ಕೆ ಸರ್ಕಾರಕ್ಕೆ ವಿರುದ್ಧ ನೀಡಿರುವ ಹೇಳಿಕೆಗಳು ಕೆಪಿಸಿಸಿ ಸಭೆಯಲ್ಲಿ ಚರ್ಚೆಯಾಗಿವೆ. ಅವುಗಳನ್ನು ರಾಜ್ಯ ಉಸ್ತುವಾರಿ ದಿಗ್ವಿಜಯ ಸಿಂಗ್ ಅವರು ಎಐಸಿಸಿ ಗಮನಕ್ಕೂ ತಂದಿದ್ದಾರೆ. ಆದ್ದರಿಂದ ಮುಂದೇನೂ ಕ್ರಮ ತೆಗೆದುಕೊಳ್ಳಬೇಕು ಎಂದು ಎಐಸಿಸಿ ನಿರ್ಧರಿಸಲಿದೆ ಎಂದವರು ಹೇಳಿದರು.
Discussion about this post