ನವದೆಹಲಿ, ಅ.8: ಸರ್ಜಿಕಲ್ ಸ್ಟೈಕ್ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಕ್ತದ ದಲ್ಲಾಳಿ ಎಂದು ಬಹಿರಂಗವಾಗಿ ಟೀಕಿಸಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಈ ಕುರಿತಂತೆ ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದ್ದು, ರಾಹುಲ್ ವಿರುದ್ಧ ಚಂದೌಲಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.
ಉತ್ತರ ಪ್ರದೇಶದ ರ‌್ಯಾಲಿಯೊಂದರಲ್ಲಿ ಮಾತನಾಡಿದ್ದು ರಾಹುಲ್, ಸೈನಿಕರ ರಕ್ತದ ಹಿಂದ ಮೋದಿ ಅಡಗಿ ಕುಳಿತಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಸೈನಿಕರನ್ನು ನುಗ್ಗಿಸಿ ಅವರ ಸಾವಿಗೆ ಕಾರಣವಾಗಿರುವ ಮೋದಿ ಸೈನಿಕರ ರಕ್ತದ ದಲ್ಲಾಳಿಯ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದರು.
ದೇಶದ ಭದ್ರತೆ ವಿಚಾರದಲ್ಲಿ ನಡೆದ ಸರ್ಜಿಕಲ್ ಸ್ಟ್ರೈಕ್‌ನ್ನು ರಾಜಕೀಯ ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿರುವ ಕಾಂಗ್ರೆಸ್ ಹಾಗೂ ಮೋದಿ ವಿರುದ್ಧ ಹೇಳಿಕೆ ನೀಡಿದ್ದ ರಾಹುಲ್ ಗಾಂಧಿ ವಿರುದ್ಧ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ, ರಾಹುಲ್ ವಿರುದ್ಧ ದೂರು ದಾಖಲಾಗುವ ಮೂಲಕ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದಂತಾಗಿದೆ.
Discussion about this post