Read - < 1 minute
ನವದೆಹಲಿ, ಅ.18: ಲೋಧಾ ಸಮಿತಿಯ ಶಿಫಾರಸುಗಳನ್ನು ಜಾರಿಗೊಳಿಸಲು ಈ ಹಿಂದೆ ನೀಡಿದ್ದ ಆದೇಶಗಳ ವಿರುದ್ಧ ಬಿಸಿಸಿಐ ಸಲ್ಲಿಸಿದ್ದ ಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ.
ಸುಪ್ರೀಂಕೋರ್ಟ್ ಕಳೆದ ಜುಲೈ 18ರಂದು ಭಾರತೀಯ ಕ್ರಿಕೆಟ್ ಸಂಸ್ಥೆಯ ಕೇಂದ್ರ ಹಾಗೂ ರಾಜ್ಯಮಟ್ಟದ ಸಂಸ್ಥೆಗಳಿಗೆ ಅನ್ವಯವಾಗುವಂತಹ ನ್ಯಾಯಮೂರ್ತಿ ಲೋಧಾ ಸಮಿತಿಯ ಬಹುತೇಕ ಶಿಫಾರಸುಗಳನ್ನು ಅಂಗೀಕರಿಸಿತ್ತು.
ಲೋಧಾ ಸಮಿತಿಯ ಶಿಫಾರಸುಗಳನ್ನು ಅನುಷ್ಠಾನಗೊಳಿಸಲು ಸುಪ್ರೀಂಕೋರ್ಟ್ ಬಿಸಿಸಿಐಗೆ 4ರಿಂದ 6 ವಾರಗಳ ಕಾಲಮಿತಿಯನ್ನು ನಿಗದಿಪಡಿಸಿತ್ತು. ಲೋಧಾ ಸಮಿತಿ ತನ್ನ ವರದಿಯಲ್ಲಿ ಬಿಸಿಸಿಐ ಚುನಾವಣೆಯಲ್ಲಿ ಪ್ರತಿಯೊಂದು ರಾಜ್ಯ ಒಂದು ಮತವನ್ನು ಮಾತ್ರ ಚಲಾಯಿಸಬೇಕೆಂದು, ಸಚಿವರು, ನಾಗರಿಕ ಅಧಿಕಾರಿಗಳು ಬಿಸಿಸಿಐ ಹಾಗೂ ರಾಜ್ಯ ಕ್ರಿಕೆಟ್ ಸಂಘಟನೆಗಳ ಪದಾಧಿಕಾರಿಗಳಾಗಬಾರದೆಂದು, 70 ವರ್ಷಗಳ ವಯೋಮಿತಿ ಮೀರಿರಬಾರದೆಂದು ತನ್ನ ಶಿಫಾರಸ್ಸಿನಲ್ಲಿ ತಿಳಿಸಿತ್ತು.
ಆದರೆ, ಶಿಫಾರಸ್ಸುಗಳನ್ನು ಬಿಸಿಸಿಐ ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನಿಸಿತ್ತು. ಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ.
Discussion about this post