ಉಡುಪಿ.ಅ.೨- ಜಿಲ್ಲಾ ಬಿ.ಜೆ.ಪಿ. ಯುವ ಮೋರ್ಚಾ ವತಿಯಿಂದ ಶನಿವಾರ ಗಾಂಧಿ ಜಯಂತಿ ದಿನಾಚರಣೆಯ ಹಿನ್ನೆಲೆಯಲ್ಲಿ ನಗರದ ಅಜ್ಜರಕಾಡು ಭುಜಂಗ ಪಾರ್ಕಿನಲ್ಲಿರುವ ಗಾಂಧೀ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಲಾಯಿತು. ನಂತರ ಪಾರ್ಕಿನಲ್ಲಿ ಮತ್ತು ಸುತ್ತಮುತ್ತ ಸ್ವಚ್ಛ ಭಾರತ ಅಭಿಯಾನವನ್ನು ನಡೆಸಲಾಯಿತು.
ಈ ಕಾರ್ಯಕ್ರಮದಲ್ಲಿ ಬಿ.ಜೆ.ಪಿ. ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಮಾಜಿ ಶಾಸಕ ಕೆ. ರಘುಪತಿ ಭಟ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್ ಸುವರ್ಣ, ಉಪಾಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ, ಬಿ.ಜೆ.ಪಿ. ಮುಖಂಡರಾದ ಅಂಡಾರು ದೇವಿ ಪ್ರಸಾದ್ ಶೆಟ್ಟಿ, ರಾಘವೇಂದ್ರ ಉಪ್ಪೂರು, ಶೈಲೇಂದ್ರ ಶೆಟ್ಟಿ, ಹೇಮನಾಥ ಶೆಟ್ಟಿ, ದೀಪಕ್ ಕಾಮತ್, ನಗರಸಭೆ ಸದಸ್ಯೆ ಗೀತಾ ಶೆಟ್ ಮೊದಲಾದವರು ಭಾಗವಹಿಸಿದ್ದರು.
Discussion about this post