ಬೆಂಗಳೂರು, ಅ.5: ನಿರ್ಮಾಣ ಹಂತದಲ್ಲಿದ್ದ ಐದು ಅಂತಸ್ತಿನ ಕಟ್ಟಡ ಕುಸಿದು, 8 ಕ್ಕೂ ಹೆಚ್ಚು ಮಂದಿ ಅವಶೇಷಗಳಡಿ ಸಿಲುಕಿರುವ ಘಟನೆ ಬೆಳ್ಳಂದೂರು ಗೇಟ್ ಬಳಿ ನಡೆದಿದೆ.
ಮೂರು ಅಗ್ನಿಶಾಮಕ ದಳದ ವಾಹನ ಹಾಗೂ ಸಿಬ್ಬಂದಿ ಸ್ಥಳಕ್ಕೆ ತಲುಪಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. 20ಕ್ಕೂ ಅಧಿಕ ಕಾರ್ಮಿಕರು ಘಟನೆ ನಡೆದಾಗ ಇದ್ದರು ಎನ್ನಲಾಗಿದ್ದು, ನಾಲ್ವರನ್ನು ರಕ್ಷಿಸಲಾಗಿದೆ. ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಟ್ಟಡ ಮಾಲಕರ ಬಗ್ಗೆ ಮಾಹಿತಿ ಅಸ್ಪಷ್ಟವಾಗಿದೆ. ಕಟ್ಟಡ ಕುಸಿದು, ಪಕ್ಕದ ಕಟ್ಟಡಕ್ಕೂ ಹಾನಿಯಾಗಿದೆ ಎಂದು ತಿಳಿದುಬಂದಿದೆ.
Discussion about this post