ವಿಶ್ವಸಂಸ್ಥೆಯಲ್ಲಿ ಭಾರತದ ಮಹತ್ವದ ನಡೆ. ಅಂತರ‌್ರಾಷ್ಟ್ರೀಯ ವೇದಿಕೆಯಲ್ಲಿ ಪ್ರಥಮ ಪ್ರಸ್ತಾಪ
ಜಿನೀವಾ, ಸೆ.೧೫: ಭಯೋತ್ಪಾದಕ ಸಂಘಟನೆಗಳ ವಿಚಾರದಲ್ಲಿ ಕಠಿಣ ಕ್ರಮ ತೆಗೆದುಕೊಳ್ಳುವಲ್ಲಿ ವಿಶ್ವಸಂಸ್ಥೆ ವಿಫಲವಾಗಿದೆ ಎಂದು ಭಾರತ ತನ್ನ ಅಸಮಾಧಾನ ಸೂಚಿಸಿದೆ.
ಅಫ್ಘಾನಿಸ್ತಾನದ ಬಗ್ಗೆ ವಿಶ್ವಸಂಸ್ಥೆ ಮಂಡಳಿಯಲ್ಲಿ ನಡೆದ ಸಭೆಯ ವೇಳೆ ಆಕ್ಷೇಪ ವ್ಯಕ್ತಪಡಿಸಿದೆ. ಭಾರತ ಖಾಯಂ ಪ್ರತಿನಿಧಿ ತನ್ಮಯ ಲಾಲ್ ಈ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ತಾಲಿಬಾನ್ ಉಗ್ರ ಸಂಘಟನೆಯ ಮುಖಂಡನನ್ನು ಈ ವರೆಗೂ ಭಯೋತ್ಪಾದಕರ ಪಟ್ಟಿಯಲ್ಲಿ ಸೇರಿಸದೆ ಇಲ್ಲದಿರುವುದು ಆಶ್ಚರ್ಯ ಉಂಟುಮಾಡಿದೆ. ಅಫ್ಘಾನಿಸ್ತಾನದಲ್ಲಿ ಭಯೋತ್ಪಾದಕ ದಾಳಿಯನ್ನು ನಡೆಸುತ್ತಿರುವ ತಾಲಿಬಾನ್ ಉಗ್ರ ಸಂಘಟನೆಯ ನೂತನ ಮುಖಂಡ ಹೈಬತ್-ಉಲ್ಲಾಹ್‌ನಿಗೆ ತಪ್ಪಿಸಿಕೊಳ್ಳಲು ವಿಶ್ವಸಂಸ್ಥೆ ಅವಕಾಶ ನೀಡಿದೆ. ಉಗ್ರಕೃತ್ಯಕ್ಕೆ ಸಂಘಟನೆಗಳ ನಾಯಕರನ್ನು ಹೊಣೆ ಮಾಡಲು ಹಿಂಜರಿದಂತಿದೆ. ಅಂತರ‌್ರಾಷ್ಟ್ರೀಯ ಶಾಂತಿ, ಭದ್ರತೆ ವಿಚಾರವಾಗಿ ನಡೆದುಕೊಳ್ಳುತ್ತಿರುವ ರೀತಿ ಇದೇನಾ ಎಂದು ಪ್ರಶ್ನಿಸಿದ್ದಾರೆ.
ಅಫ್ಘಾನಿಸ್ತಾನದ ನೆರೆಯ ರಾಷ್ಟ್ರಗಳು ಭಯೋತ್ಪಾದನೆಗೆ ಸುರಕ್ಷಿತ ವಾತಾವರಣ ಕಲ್ಪಿಸುವುದನ್ನು ಮೊದಲು ನಿಲ್ಲಿಸಬೇಕು. ಭಯೋತ್ಪಾದಕ ಸಂಘಟನೆಗಳ ವಿರುದ್ಧದ ನಿಷೇಧವನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಪರಿಣಾಮಕಾರಿ ಅನುಷ್ಠಾನಗೊಳಿಸಬೇಕಿದೆ ಎಂದಿದ್ದಾರೆ.
Discussion about this post