Read - < 1 minute
ಇಸ್ಲಾಮಾಬಾದ್:ಅ-16; ಕಾಶ್ಮೀರ ವಿಚಾರವಾಗಿ ಭಾರತದೊಂದಿಗೆ ಮಾತುಕತೆ ನಡೆಸಲು ಸಿದ್ಧ ಎಂದು ಪಾಕ್ ಪ್ರಧಾನಿ ನವಾಜ್ ಷರೀಫ್ ತಿಳಿಸಿದ್ದಾರೆ.
ಅಜರ್ಬಿರೈ ಜಾನ್ ಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಕಾಶ್ಮೀರ ವಿಚಾರವನ್ನು ಭಾರತ ಗಂಭೀರವಾಗಿ ಪರಿಗಣಿಸಿದ್ದೇ ಆದರೆ, ಭಾರತದೊಂದಿಗೆ ಮಾತುಕತೆ ನಡೆಸಲು ಪಾಕಿಸ್ತಾನ ಸಿದ್ಧವಿದೆ ಎಂದು ಹೇಳಿದ್ದಾರೆ.
ಭಾರತದೊಂದಿಗಿರುವ ಕಾಶ್ಮೀರ ಹಾಗೂ ಇನ್ನಿತರೆ ಸಮಸ್ಯೆಗಳ ಕುರಿತಂತೆ ಮಾತುಕತೆ ನಡೆಸಲು ಪಾಕಿಸ್ತಾನ ಸಿದ್ಧವಿದೆ. ಈ ಬಗ್ಗೆ ಮಾತುಕತೆ ನಡೆಸಲು ಭಾರತವನ್ನು ಆಹ್ವಾನಿಸಿತ್ತು. ಆದರೆ, ಸಮಸ್ಯೆ ಬಗ್ಗೆ ಮಾತನಾಡಲು ಭಾರತವೇ ಸಿದ್ಧವಿಲ್ಲ ಎಂದು ಹೇಳಿದ್ದಾರೆ.
ಕಾಶ್ಮೀರದಲ್ಲಿ ಸಾಕಷ್ಟು ಸಮಸ್ಯೆಗಳು ತಲೆದೋರಿವೆ. ಹಿಂಸಾಚಾರಗಳು ತೀವ್ರಗೊಳ್ಳುತ್ತಿವೆ. ಇಂತಹ ಸಂದರ್ಭದಲ್ಲಿ ಆದರೂ, ಕಾಶ್ಮೀರ ವಿಚಾರವನ್ನು ಭಾರತ ಗಂಭೀರವಾಗಿ ಪರಿಗಣಿಸಿ ವಿಶ್ವಸಂಸ್ಥೆಯ ನೇತೃತ್ವದಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಬೇಕಿದೆ ಎಂದಿದ್ದಾರೆ.
ಇದೇ ವೇಳೆ ಉರಿ ಉಗ್ರರ ದಾಳಿ ಕುರಿತು ಪ್ರತಿಕ್ರಿಯಿಸಿದ ಅವರು, ಭಾರತ ಪಾಕಿಸ್ತಾನದ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದೆ. ಉರಿ ದಾಳಿ ತನಿಖೆ ನಡೆಸುವ ಮೊದಲೇ ಪಾಕ್ ವಿರುದ್ಧ ಆರೋಪ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.
Discussion about this post