Read - < 1 minute
ನವದೆಹಲಿ, ಅ.12: ಭಾರತ-ಪಾಕಿಸ್ಥಾನ ಉಭಯದೇಶಗಳ ನಡುವೆ ಉಂಟಾಗಿರುವ ಬಿಕ್ಕಟ್ಟು, ಸಂಘರ್ಷಗಳ ಪರಿಹಾರಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಚೀನಾ ಭರವಸೆ ನೀಡಿದೆ.
ಈ ಬಗ್ಗೆ ಪಾಕಿಸ್ತಾನದ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ಮಾತನಾಡಿರುವ ಚೀನಾ ವಿದೇಶಾಂಗ ಸಚಿವಾಲಯದ ಸಲಹೆಗಾರ ಯುವಾನ್, ಭಾರತ-ಪಾಕ್ ನಡುವಿನ ಸಮಸ್ಯೆ ಬಗೆಹರಿಸಲು ಚೀನಾ ಸಹಕಾರ ನೀಡಲಿದೆ ಎಂದಿದ್ದಾರೆ. ಉಭಯ ದೇಶಗಳ ನಡುವೆ ಏರ್ಪಟ್ಟಿರುವ ಸಂಘರ್ಷ ಕೇವಲ ಆ ಎರಡು ದೇಶಗಳ ಮೇಲೆ ಪರಿಣಾಮ ಬೀರುವುದಿಲ್ಲ. ಇಡೀ ದಕ್ಷಿಣ ಏಷ್ಯಾ ಮೇಲೂ ಪರಿಣಾಮ ಬೀರಲಿದೆ. ಹೀಗಾಗಿ ಭಾರತ ಮತ್ತು ಪಾಕಿಸ್ಥಾನ ನಡುವೆ ಏರ್ಪಟ್ಟಿರುವ ಸಮಸ್ಯೆಗಳ ಬಗೆಹರಿಕೆಗೆ ಸಹಾಯ ಮಾಡಲು ಚೀನಾ ಸಿದ್ಧವಿದೆ ಎಂದು ಹೇಳಿದ್ದಾರೆ.
ಉರಿ ಸೆಕ್ಟರ್ ನಲ್ಲಿ ಉಗ್ರರ ದಾಳಿ ಸೇರಿದಂತೆ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರು ನಡೆಸುತ್ತಿರುವ ಅಟ್ಟಹಾಸ ಹಿನ್ನೆಲೆಯಲ್ಲಿ ಪಾಕ್ ವಿರುದ್ಧ ಕಠಿಣ ನಿರ್ಧಾರ ತೆಗೆದುಕೊಳ್ಳಲು ಭಾರತ ನಿರ್ಧರಿದ್ದು, ಭಾರತ ಮತ್ತು ಪಾಕಿಸ್ಥಾನ ಗಡಿಯನ್ನು ಸಂಪೂರ್ಣವಾಗಿ ಬಂದ್ ಮಾಡುವ ಚಿಂತನೆ ನಡೆಸಿತ್ತು. ಈ ನಿಟ್ಟಿನಲ್ಲಿ ಚೀನಾ ಈಗ ಉಭಯ ದೇಶಗಳ ನಡುವಿನ ಸಮಸ್ಯೆ ಬಗೆಹರಿಸಲು ಯತ್ನಿಸುವಾಗಿ ಹೇಳಿಕೆ ನೀಡಿದೆ.
Discussion about this post