No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Tuesday, February 17, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಭೂ ಕಬಳಿಕೆದಾರರ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಾಗಬೇಕು: ಸಿಎಂ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 31, 2016
in ಬೆಂಗಳೂರು ನಗರ
0
Share on FacebookShare on TwitterShare on WhatsApp
ಬೆಂಗಳೂರು, ಆ.31: ಭೂ ಕಬಳಿಕೆದಾರರ ವಿರುದ್ಧ ಜಾಮೀನು ರಹಿತ ಪ್ರಕರಣಗಳು ದಾಖಲಾಗಬೇಕು, ಕಠಿಣ ಶಿಕ್ಷೆಯಾಗುವಂತಾಗಬೇಕು, ಭೂ ಕಬಳಿಕೆ ಕೇವಲ ಕಬಳಿಕೆದಾರರಿಂದಷ್ಟೇ ಆಗಿಲ್ಲ, ಸರ್ಕಾರಿ ಅಧಿಕಾರಿಗಳೂ ಇದಕ್ಕೆ ನೆರವು ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಂದಾಯ ಭವನದಲ್ಲಿ ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ 2011ರ ಅನ್ವಯ ಸ್ಥಾಪನೆಯಾದ ವಿಶೇಷ ನ್ಯಾಯಾಲಯದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಸದನ ಜಂಟಿ ಸಮಿತಿ ವರದಿ ಪ್ರಕಾರ ಬೆಂಗಳೂರು ಒಂದರಲ್ಲೇ 1.22 ಲಕ್ಷ ಸಾವಿರ ಎಕರೆ ಜಾಗ ಒತ್ತುವರಿಯಾಗಿದೆ. 34 ಸಾವಿರ ಒತ್ತುವರಿ ಪ್ರಕರಣಗಳಿವೆ. ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಭೂಮಿಗೆ ಬೆಲೆ ಹೆಚ್ಚಾಗಿರುವುದರಿಂದ ಭೂ ಅಕ್ರಮ ಹೆಚ್ಚಾಗಿದೆ. ಕಬಳಿಕೆ ಕೇವಲ ಕಬಳಿಕೆದಾರರಿಂದಷ್ಟೇ ಆಗಿಲ್ಲ, ಸರ್ಕಾರಿ ಅಧಿಕಾರಿಗಳು ಇದಕ್ಕೆ ನೆರವು ನೀಡಿದ್ದಾರೆ ಅಲ್ವೇನ್ರೀ ಎಂದು ಕಂದಾಯ ಇಲಾಖೆ ಅಧಿಕಾರಿಗಳನ್ನು ಕೇಳಿದರು. ಇಲಾಖೆ ಅಧಿಕಾರಿಗಳು  ಮೌನ ವಹಿಸಿದಾಗ, ಮಾತಾಡ್ರೀ ನೀವು ಎಂದು ಹೇಳಿದರು.
ಭೂ ಕಬಳಿಕೆದಾರರು ಹಣದಿಂದ ಏನು ಬೇಕಾದರೂ ಮಾಡಬಹುದು ಎಂದುಕೊಂಡಿದ್ದಾರೆ. ಭೂ ಕಬಳಿಕೆ ಮಾಡಿ ದುಡ್ಡು ಮಾಡಿದವರು ಏನನ್ನು ಬೇಕಾದರೂ ಖರೀದಿ ಮಾಡಬಹುದು ಎಂದುಕೊಂಡಿದ್ದಾರೆ. ಸಚಿವರನ್ನು, ಮುಖ್ಯಮಂತ್ರಿಯನ್ನು ಕೊಂಡುಕೊಳ್ಳಬಹುದು, ನ್ಯಾಯಾಧೀಶರನ್ನು ಬೇಕಾದರೂ ಕೊಂಡುಕೊಳ್ಳಬಹುದು ಎಂದುಕೊಂಡಿದ್ದಾರೆ ಎಂದು ವಿಷಾದ ವ್ಯಕ್ತಪಡಿದರು.
ಭೂ ಕಬಳಿಕೆದಾರರ ವಿರುದ್ಧ ಜಾಮೀನು ರಹಿತ ಪ್ರಕರಣಗಳು ದಾಖಲಾಗಬೇಕು, ಕೆಲವರು ವಿಶೇಷ ಕೋರ್ಟ್ ಸ್ಥಾಪನೆಯಾಗದಂತೆ ತಡೆಯುವ ಯತ್ನ ಮಾಡಿದ್ದರು. ಅವರಿಗೆಲ್ಲ ಈಗ ನಡುಕ ಶುರುವಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.
ವಿಶೇಷ ನ್ಯಾಯಾಲಯದಲ್ಲಿ ದಾಖಲಾಗುವ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಿ ಶಿಕ್ಷೆ ವಿಧಿಸುವಂತಾಗಲು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ಐವರ ಸಮಿತಿ ರಚಿಸಲಾಗಿದೆ ಎಂದರು.
ಭೂಕಬಳಿಕೆದಾರರಿಗೆ ಶಿಕ್ಷೆ ವಿಧಿಸುವುದರ ಜೊತೆಗೆ ನಿರಪರಾಧಿಗಳಿಗೆ ಶಿಕ್ಷೆಯಾಗದಂತೆ ನೋಡಿಕೊಳ್ಳುವ ಅಗತ್ಯವಿದೆ. ಭೂ ಕಬಳಿಕೆ ದೊಡ್ಡ ಮಾಫಿಯಾವಾಗಿ ಬೆಳೆದಿದ್ದು, ಬಿಲ್ಡರ್ ಗಳಿರಲಿ, ಸಮಾಜದ ಎಷ್ಟೇ ಪ್ರತಿಷ್ಠಿತರಿರಲಿ ಅಂತಹವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಕೈಗೊಳ್ಳಬೇಕು ಎಂದು ಹೇಳಿದರು.
ಭಾರತೀಯ ದಂಡ ಸಂಹಿತೆಯಲ್ಲಿ ಅನೇಕ ಕಾನೂನುಗಳಿವೆ. ಆದರೂ ಅವುಗಳ ಅನುಷ್ಠಾನದ ಕೊರತೆಯಿಂದ ಕಬಳಿಕೆದಾರರಿಗೆ ಅನುಕೂಲವಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಾವಿರಾರು ಎಕರೆ ಸರ್ಕಾರಿ ಭೂಮಿ ಒತ್ತುವರಿಯನ್ನು ತೆರವು  ಮಾಡಲಾಗಿದೆ ಎಂದು ತಿಳಿಸಿದರು.
ಕಾನೂನು ಸಚಿವ ಜಯಚಂದ್ರ ಮಾತನಾಡಿ, ಭೂಮಿಯನ್ನು ಕಬಳಿಸಿ ಸೊಕ್ಕಿನಿಂದ ಮೆರೆಯುವ ಜೊತೆಗೆ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವವರ ಅಟ್ಟಹಾಸವನ್ನು ನಿಯಂತ್ರಿಸಬೇಕಿದೆ ಎಂದು ಹೇಳಿದರು.
ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಮಾತನಾಡಿ, ಇರುವ ಕಾನೂನುಗಳನ್ನು ಪರಿಣಾಮಕಾರಿಯಾಗಿ ಜಾರಿ ಮಾಡಿ ಒತ್ತುವರಿ ತೆರವಿಗೆ ಮುಂದಾಗಿ ಎಂದು ಹೇಳಿದರು.
ನಗರ ಜಿಲ್ಲಾಧಿಕಾರಿ ವಿ. ಶಂಕರ್, ಅಧಿಕಾರಿಗಳಾದ ಎಂ.ವೈ. ಜಯಂತಿ, ರಮಣರೆಡ್ಡಿ, ಎಚ್.ಕೆ. ನಾರಾಯಣ ಮತ್ತಿತರರು ಉಪಸ್ಥಿತರಿದ್ದರು.
ಕಾನೂನಿನ ಅನುಷ್ಠಾನ ಪರಿಣಾಮಕಾರಿಯಾಗಿರಲಿ:  ಸಿಎಂ  
ರಾಜ್ಯದಲ್ಲಿ ಇದೊಂದು ಸ್ಮರಣೀಯ ಮತ್ತು ಐತಿಹಾಸಿಕ ದಿನವಾಗಿದ್ದು, ಕಾನೂನು ಜಾರಿಗೆ ತರುವುದಕ್ಕಿಂತ ಮುಖ್ಯವಾಗಿ ಅದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ಅತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಬೆಂಗಳೂರಿನ ಕಂದಾಯ ಭವನದಲ್ಲಿ ರಾಜ್ಯ ಸರ್ಕಾರವು ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮದಡಿಯಲ್ಲಿ  ನೂತನವಾಗಿ ಸ್ಥಾಪಿಸಿರುವ ವಿಶೇಷ ನ್ಯಾಯಾಲಯ ಉದ್ಘಾಟಿಸಿ ಮಾತನಾಡಿದರು. .
ಬೆಂಗಳೂರಿನಲ್ಲಿ ಒಟ್ಟು 1.23 ಲಕ್ಷ ಎಕರೆ ಸರಕಾರಿ ಜಮೀನಿದ್ದು ಅದರಲ್ಲಿ 34,111 ಎಕರೆ ಜಮೀನು ಒತ್ತುವರಿಯಾಗಿದೆ ಎಂದು 2007ರ ವರದಿಯಲ್ಲಿ ತಿಳಿಸಲಾಗಿತ್ತು, ಇದರಲ್ಲಿ  ಉದ್ಯಾನವನ ಮತ್ತು ಸಾರ್ವಜನಿಕ ಉಪಯೋಗಿ ಸ್ಥಳಗಳು ಸೇರಿದಂತೆ 16,596 ಎಕರೆ ಭೂಮಿಯನ್ನು ತೆರವುಗೊಳಿಸಲು ಸಾದ್ಯವಿಲ್ಲ. ಉಳಿದ 17515 ಎಕರೆ ಅತಿಕ್ರಮಣವಾಗಿತ್ತು ಅದರಲ್ಲಿ 15641 ಎಕರೆ ಭೂಮಿಯನ್ನು ಒತ್ತುವರಿಯಿಂದ ತೆರವುಗೊಳಿಸಲಾಗಿದೆ, ಅದರಲ್ಲಿ ವಿಶೇಷವಾಗಿ ತಮ್ಮ ಅಧಿಕಾರಾವಧಿಯಲ್ಲಿ 6,000 ಎಕರೆ ಸರಕಾರಿ ಭೂಮಿಯನ್ನು ತೆರವುಗೊಳಿಸಿದ ತೃಪ್ತಿ ತಮಗಿದೆ ಎಂದರು.ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ ಅವರು ಕಾನೂನು ಸಚಿವನಾಗಿ ಇಂದು ನಾನು ಅತ್ಯಂತ ಸಂಭ್ರಮ ಪಡುವ ಕ್ಷಣ, ಇವತ್ತಿನಿಂದ ಹೊಸ ಕಾನೂನು ಜಾರಿಯಾಗಿದೆ, ಅಕ್ರಮ ಆಸ್ತಿವಂತರ ಅಟ್ಟಹಾಸ ಹೆಚ್ಚಾಗಿದೆ, ಸಾವಿರಾರು ಎಕ್ಕರೆ ಸರಕಾರಿ ಭೂಮಿಯನ್ನು ಮರಳಿ ಪಡೆಯಲು ಮುಖ್ಯಮಂತ್ರಿಯವರು ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸುವುದರ ಮೂಲಕ ದಿಟ್ಟತನ ಮೆರೆದಿದ್ದಾರೆ, ಹಿಂದಿನ ಯಾವ ಮುಖ್ಯಮಂತ್ರಿ ಮಾಡಲಾರದ್ದನ್ನು ಸಿದ್ದರಾಮಯ್ಯ ಸಾಧಿಸಿ ತೋರಿಸಿದ್ದಾರೆ ಎಂದು ಹೇಳಿದರು.
ನ್ಯಾಯಾಲಯದ ವ್ಯಾಪ್ತಿ ರಾಜ್ಯಮಟ್ಟಕ್ಕಿದ್ದು ಅದರಲ್ಲಿ ಮುಖ್ಯವಾಗಿ ನಗರ ಸ್ಥಾನಗಳಲ್ಲಿ ನಡೆದಿರುವ ಅತಿಕ್ರಮಣಗಳ ಒತ್ತನ್ನು ನೀಡಬೇಕು, ಮುಂದಿನ 3 ತಿಂಗಳಲ್ಲಿ ಈ ನ್ಯಾಯಾಲಯದ ಮುಖಾಂತರ 500ಕ್ಕೂ ಹೆಚ್ಚು ಕೇಸುಗಳನ್ನು ಬಗೆಹರಿಸುವಂತಾಗಬೇಕು ಎಂದರು.
Share196Tweet123Send
Previous Post

ರಾಜ್ಯ ಸಚಿವ ಸಂಪುಟ ಸಭೆ: ಪ್ರಮುಖ ತೀರ್ಮಾನಗಳು

Next Post

“ಕ್ಷೀರ ಕ್ರಾಂತಿ” ಮೂಲಕ ರೈತರಿಗೆ ನೆರವು: ಸರ್ಕಾರ ನಿರ್ಧಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

"ಕ್ಷೀರ ಕ್ರಾಂತಿ" ಮೂಲಕ ರೈತರಿಗೆ ನೆರವು: ಸರ್ಕಾರ ನಿರ್ಧಾರ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ವಿಜಯಪುರ ರೈಲ್ವೆ ನಿಲ್ದಾಣದಲ್ಲಿ ಸಂತ ಸೇವಾಲಾಲ್ ಜಯಂತಿ ಸಂಭ್ರಮ

ವಿಜಯಪುರ ರೈಲ್ವೆ ನಿಲ್ದಾಣದಲ್ಲಿ ಸಂತ ಸೇವಾಲಾಲ್ ಜಯಂತಿ ಸಂಭ್ರಮ

February 17, 2026
ಕನ್ಸರ್ವೆನ್ಸಿ ಅಂಚಿನಲ್ಲಿರುವ ಮರಗಳನ್ನು ಸಂರಕ್ಷಿಸಿ | ಪರಿಸರ ಹೋರಾಟಗಾರರ ಆಗ್ರಹ

ಕನ್ಸರ್ವೆನ್ಸಿ ಅಂಚಿನಲ್ಲಿರುವ ಮರಗಳನ್ನು ಸಂರಕ್ಷಿಸಿ | ಪರಿಸರ ಹೋರಾಟಗಾರರ ಆಗ್ರಹ

February 17, 2026
ಮಾರಿಕಾಂಬ ಜಾತ್ರೆ ಹಿನ್ನೆಲೆ | ‘ಡಂಗುರ’ ಪ್ರಚಾರಕ್ಕೆ ಚಾಲನೆ

ಮಾರಿಕಾಂಬ ಜಾತ್ರೆ ಹಿನ್ನೆಲೆ | ‘ಡಂಗುರ’ ಪ್ರಚಾರಕ್ಕೆ ಚಾಲನೆ

February 17, 2026
ಫೆ.24ರಿಂದ 28 ಪುರಾಣ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರೆ

ಫೆ.24ರಿಂದ 28 ಪುರಾಣ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರೆ

February 17, 2026
ವಿಶ್ವರಂಗಭೂಮಿ ದಿನಾಚರಣೆ ಅಂಗವಾಗಿ ಶಿವಮೊಗ್ಗದಲ್ಲಿ ಕಿರು ನಾಟಕ ಸ್ಪರ್ಧೆ

ವಿಶ್ವರಂಗಭೂಮಿ ದಿನಾಚರಣೆ ಅಂಗವಾಗಿ ಶಿವಮೊಗ್ಗದಲ್ಲಿ ಕಿರು ನಾಟಕ ಸ್ಪರ್ಧೆ

February 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL