Read - < 1 minute
ಚೆನ್ನೈ: ಸೆ:30: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಆರೋಗ್ಯ ಹದಗೆಟ್ಟಿದ್ದು, ಇಲ್ಲಿನ ಅಪೋಲೋ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ.
ಮುಖ್ಯಮಂತ್ರಿ ಜಯಲಲಿತಾ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಇನ್ನೂ ಹಲವು ದಿನಗಳ ಕಾಲ ಅವರಿಗೆ ಚಿಕಿತ್ಸೆ ನೀಡುವ ಅಗತ್ಯವಿದ್ದು, ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಮುಂದುವರೆಸಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.
ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶ್ವನಾಥನ್ ಅವರು, ಜಯಲಲಿತಾ ಅವರ ಆರೋಗ್ಯದ ಬಗ್ಗೆ ಸ್ಪಷ್ಟೀಕರಣ ನೀಡಿದ್ದು, ಜಯಲಲಿತಾ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಇನ್ನೂ ಕೆಲಕಾಲ ಚಿಕಿತ್ಸೆಯ ಅಗತ್ಯವಿರುವುದರಿಂದ ಆಸ್ಪತ್ರೆಯಲ್ಲಿಯೇ ಇರಲಿದ್ದಾರೆ ಎಂದು ಹೇಳಿದ್ದಾರೆ.
ಅವರ ಆರೋಗ್ಯದ ಬಗ್ಗೆ ಇರುವ ವದಂತಿಗಳನ್ನು ತಳ್ಳಿ ಹಾಕಿದ್ದಾರೆ.
Discussion about this post