ಬೆಂಗಳೂರು, ಅ.೬: ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ತಾತ್ಕಾಲಿಕ ನಿಟ್ಟುಸಿರು ಬಿಡುವಂತಾದ ಬೆನ್ನಲ್ಲೇ ಮಹದಾಯಿ ಸಮಸ್ಯೆ ಪರಿಹಾರದ ಕುರಿತು ಮಾತುಕತೆ ನಡೆಸಲು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಧ್ಯಸ್ಥಿಕೆ ವಹಿಸಲು ಮುಂದಾಗಿದ್ದಾರೆ.
ಈ ಕುರಿತಂತೆ ಕರ್ನಾಟಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಗೋವಾ ಮುಖ್ಯಮಂತ್ರಿ ಲಕ್ಷ್ಮೀಕಾಂತ್ ಪರ್ಸೇಕರ್ ಅವರಿಗೆ ಪತ್ರ ಬರೆದಿರುವ ಅವರು, ಮಹದಾಯಿ ನದಿ ನೀರು ಹಂಚಿಕೆ ವಿಚಾರದ ಕುರಿತು ಸಭೆ ನಡೆಸೋಣ. ಆ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳೋಣ ಎಂದು ತಿಳಿಸಿದ್ದಾರೆ.
ಮಹದಾಯಿ ಕುರಿತು ಮುಂಬೈನಲ್ಲಿ ಅ.೨೧ರಂದು ಸಭೆ ನಿಗದಿಯಾಗಿದೆ. ಕರ್ನಾಟಕ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ಆಹ್ವಾನಕ್ಕೆ ಒಪ್ಪಿಕೊಂಡಿದ್ದು, ಗೋವಾ ಸಿಎಂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
Discussion about this post