Read - < 1 minute
ಬೆಂಗಳೂರು, ಅ.13: ಮಹದಾಯಿ ನದಿ ನೀರಿನ ಸಮಸ್ಯೆ ಕುರಿತು ಇದೇ 19 ರಂದು ಮುಖ್ಯಮಂತ್ರಿಗಳು ಕರೆದಿರುವ ಸರ್ವಪಕ್ಷ ಸಭೆಯಲ್ಲಿ ಬಿಜೆಪಿ ಪಾಲ್ಗೊಳ್ಳಲಿದೆ ಎಂದು ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಅಲ್ಲದೇ ಇದೇ 21 ರಂದು ಮಹಾರಾಷ್ಟ್ರ ಕರೆದಿರುವ ಗೋವಾ-ಕರ್ನಾಟಕ ಮುಖ್ಯಮಂತ್ರಿಗಳ ಸಭೆಯಲ್ಲಿ ಎರಡೂ ರಾಜ್ಯಗಳ ಪ್ರತಿಪಕ್ಷದ ನಾಯಕರೂ ಭಾಗವಹಿಸುವಂತೆ ಮನವೊಲಿಸಬೇಕೆಂದು ಒತ್ತಾಯಿಸಿದ್ದಾರೆ.
ಬೆಂಗಳೂರಿನ ಚಾಲುಕ್ಯ ಸರ್ಕಲ್ ನಿಂದ ಹೆಬ್ಬಾಳದವರೆಗೆ ಸ್ಟೀಲ್ ಮೇಲ್ಸೇತುವೆ ನಿರ್ಮಿಸಲು ಹೊರಟಿರುವುದರ ಹಿಂದೆ ಭಾರೀ ಪ್ರಮಾಣದ ಭ್ರಷ್ಟಾಚಾರ ಅಡಗಿದೆ. ಈ ಯೋಜನೆಯನ್ನು ತಕ್ಷಣವೇ ಕೈಬಿಡಬೇಕು. ಬಡವರ ಮನೆಯಲ್ಲಿ ನಾವು ಸಂಭವಿಸಿದರೆ ತಕ್ಷಣವೇ ಐದು ಸಾವಿರ ರೂಪಾಯಿ ಸರ್ಕಾರ ಬಿಡುಗಡೆ ಮಾಡುತ್ತದೆ. ಅದರೆ ಕಳೆದ ಒಂದು ವರ್ಷದಿಂದ ಈ ಸಂಬಂಧ ಹಣವನ್ನು ಬಿಡುಗಡೆ ಮಾಡದೆ ಬಡವರ ಸಾವಿನ ವಿಷಯದಲ್ಲೂ ಚೆಲ್ಲಾಟವಾಡುತ್ತದೆ ಹಾಗೂ ಈ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ ಎಂದು ಖೇದ ವ್ಯಕ್ತಪಡಿಸಿದ್ದಾರೆ.
ಹಾಲು ಉತ್ಪಾದಕರಿಗೆ ಪ್ರತಿ ಲೀಟರಿಗೆ 4 ರೂ. ಪ್ರೋತ್ಸಾಹ ಧನವನ್ನು ಕಳೆದ 8 ತಿಂಗಳಿಂದ ಬಾಕಿ ಬಿಡುಗಡೆ ಮಾಡಿರುವ ಬಗ್ಗೆ 14.10.2016 ರಂದು ರಾಜ್ಯಾದ್ಯಂತ ಬಿಜೆಪಿ ಹಾಲು ಉತ್ಪಾದಕರ ಪ್ರಕೋಷ್ಠದಿಂದ ಪ್ರತಿಭಟನೆ ನಡೆಸಲಿದೆ. ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ರವರ ಬಗ್ಗೆ ಪ್ರಶ್ನೆ ಗೆ “ಶ್ರೀನಿವಾಸ್ ಪ್ರಸಾದ್ ಅವರು ಕಾಂಗ್ರೆಸ್ ಪಕ್ಷದ ಅತ್ಯಂತ ಹಿರಿಯ ಹಾಗೂ ಗೌರವಾನ್ವಿತ ನಾಯಕರು. ಅವರು ಇನ್ನೂ ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದಾರೆ. ಇಂದು ಅವರ ಬಗ್ಗೆ ಮಾತನಾಡುವುದು ಉಚಿತವಲ್ಲ. ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಟ್ಟನಂತರ ಅವರ ಬಳಿ ಚರ್ಚಿಸಿ ಇದರ ಬಗ್ಗೆ ಪ್ರತಿಕ್ರಿಯೆ ನೀಡುತ್ತೇನೆ ಎಂದು ಹೇಳಿದರು.
Discussion about this post