ನವದೆಹಲಿ, ಅ.20: ಕೆಲ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುವುದಕ್ಕೆ ಅಲ್ಲದೆ ರಾಜಕೀಯ ಮಾಡಲೆಂದೇ ಜೆಎನ್‌ಯುಗೆ ಬರುತ್ತಾರೆಂದು ಕೇಂದ್ರ ಗೃಹ ಇಲಾಖೆ ರಾಜ್ಯ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.
ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯವೊಂದು ದೊಡ್ಡ ಸಂಸ್ಥೆಯಾಗಿದ್ದು, ಉಪ ಕುಲಪತಿಗಳು ಹಾಗೂ ಇನ್ನಿತರೆ ಅಧಿಕಾರಿಗಳನ್ನು ದೂಷಿಸುವುದು ತಪ್ಪು. ವಿದ್ಯಾರ್ಥಿಗಳಾದವರು ಓದುವುದರತ್ತ ಗಮನ ಹರಿಸಬೇಕೆಂದು ಹೇಳಿದ್ದಾರೆ.
ವಿದ್ಯಾರ್ಥಿ ನಾಪತ್ತೆ ಪ್ರಕರಣ ಕುರಿತಂತೆ ಈಗಾಗಲೇ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರ ಬಳಿ ಮಾತುಕತೆ ನಡೆಸಿದ್ದೇನೆಂದು ತಿಳಿಸಿದ್ದಾರೆ.
ದೇಶ ವಿರೋಧಿ ಘೋಷಣೆಯಿಂದಾಗಿ ಸಾಕಷ್ಟು ವಿವಾದಕ್ಕೀಡಾಗಿದ್ದ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಈಗಷ್ಟೇ ಕೊಂಚ ಸುಧಾರಿತ ವಾತಾವರಣಗಳು ಕಂಡುಬಂದಿದ್ದವು. ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಯೊಬ್ಬ ಇದೀಗ ನಾಪತ್ತೆಯಾಗಿದ್ದು, ಮತ್ತೆ ಜೆಎನ್‌ಯು ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
Discussion about this post