ನವದೆಹಲಿ, ಅ.3: ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ವಿರೋಧ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರ, ಸೆ.೩೦ರ ಆದೇಶ ಮಾರ್ಪಾಡು ಕೋರಿ ಸುಪ್ರೀಂಕೋರ್ಟ್‌ಗೆ ಅಟಾರ್ನಿ ಜನರಲ್ ಮೂಲಕ ಅಫಿಡವಿಟ್‌ನ್ನು ಇಂದು ಸಲ್ಲಿಸಿದೆ.
ಈ ಮೂಲಕ ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಸುಪ್ರೀಂಕೋರ್ಟ್ ನಡುವೆ ಕಾನೂನು ಸಮರದ ಬಿಕ್ಕಟ್ಟು ಸೃಷ್ಟಿಯಾಗುತ್ತಿರುವಂತೆಯೇ ಕೊನೆಗೂ ಕೇಂದ್ರ ಸರ್ಕಾರ ಕರ್ನಾಟಕದ ನೆರವಿಗೆ ಧಾವಿಸಿದೆ.
ಸುಪ್ರೀಂ ಕೋರ್ಟ್ ಯಾವುದೇ ಕಾರಣಕ್ಕೂ ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ಆದೇಶಿಸುವಂತಿಲ್ಲ. ಮಂಡಳಿ ರಚನೆ ಏನಿದ್ದರೂ ಸಂಸತ್ತಿನ ಜವಾಬ್ದಾರಿಯಾಗಿದ್ದು, ಉಭಯ ಸದನಗಳ ಅನುಮೋದನೆ ಪಡೆದು ಮಂಡಳಿ ರಚಿಸಬೇಕಿದೆ ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.
ಸದ್ಯ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಸಾಧ್ಯ ಇಲ್ಲ. ಹಾಗಾಗಿ ಸುಪ್ರೀಂಕೋರ್ಟ್ ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸುವಂತೆ ನೀಡಿದ್ದ ಆದೇಶ ಮರುಪರಿಶೀಲಿಸಬೇಕು ಎಂದು ಎಜಿ ಮುಕುಲ್ ರೋಹ್ಟಗಿ ಸಲ್ಲಿಸಿದ ಪ್ರಮಾಣಪತ್ರದಲ್ಲಿ ಮನವಿ ಮಾಡಿದೆ.
Discussion about this post