ಮಡಿಕೇರಿ, ಅ.18: ರಾಜ್ಯದಲ್ಲಿ ಬರ ತಾಂಡವವಾಗುಡುತ್ತಿದ್ದು, ಸಂಕಷ್ಟದಲ್ಲಿರುವ ರೈತರ ಸಾಲಗಳನ್ನು ಮನ್ನಾ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಮಡಿಕೇರಿಯಲ್ಲಿಂದು ಮಾತನಾಡಿದ ಅವರು, ಬರ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರಾಜ್ಯದಲ್ಲಿ ಪ್ರತಿದಿನ ಒಂದಲ್ಲ ಒಂದು ಕೊಲೆ, ಸುಲಿಗೆ ಪ್ರಕರಣಗಳು ನಡೆಯುತ್ತಲೇ ಇದೆ. ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ಒಟ್ಟಾರೆಯಾಗಿ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳುವಲ್ಲಿ ವಿಫಲವಾಗಿದೆ. ಇನ್ನು ಬರ ಪರಿಸ್ಥಿತಿಯಿಂದ ರಾಜ್ಯದ ರೈತರು ಕಂಗಾಲಾಗಿದ್ದಾರೆ. ಈ ಕೂಡಲೇ ರೈತರಿಗೆ ಬರ ಪರಿಹಾರವನ್ನು ಬಿಡುಗಡೆ ಮಾಡಬೇಕು ಎಂದರು.
ಇನ್ನು ಟಿಪ್ಪು ಜಯಂತಿ ಕುರಿತಾಗಿ ಮಾತನಾಡಿರುವ ಬಿಎಸ್‌ವೈ, ಟಿಪ್ಪು ಜಯಂತಿಗೆ ಈಗಾಗಲೇ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಈ ವಿವಾದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಅಪನಂಬಿಕೆಯನ್ನು ಮೂಡಿಸುತ್ತಿದೆ. ಹೀಗಾಗಿ, ಟಿಪ್ಪು ಜಯಂತಿಯನ್ನು ಆಚರಿಸದೇ ಇರುವುದೇ ಒಳ್ಳೆಯದು ಎಂಬ ಸಲಹೆಯನ್ನು ಅವರು ರಾಜ್ಯ ಸರ್ಕಾರಕ್ಕೆ ನೀಡಿದ್ದಾರೆ.
Discussion about this post