ಬೆಂಗಳೂರು: ಸೆ:10: ಕೇಂದ್ರ ಸಾಂಖ್ಯಿಕ ಹಾಗೂ ಕಾರ್ಯಕ್ರಮ ಅನುಷ್ಠಾನ ಸಚಿವ ಡಿ.ವಿ.ಸದಾನಂದಗೌಡ ಅವರು, ರೈಲ್ವೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಬೆಂಗಳೂರು ಮೆಜೆಸ್ಟಿಕ್ ಬಳಿ ಇರುವ ನೈರುತ್ಯ ರೈಲ್ವೆ ವಿಭಾಗೀಯ ಕಚೇರಿಯಲ್ಲಿ ನಡೆದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವರು ರೈಲ್ವೆ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಸಂಜಯ್ ಅಗರವಾಲ್ ಅವರನ್ನು ಉದ್ದೇಶಿಸಿ ಮಾತನಾಡಿದ ಗೌಡರು, ನಿಮ್ಮನ್ನು ನೀವು ಬೆಂಗಳೂರಿಗೆ ಬಾಸ್ ಅಂದುಕೊಳ್ಳಬೇಡಿ. ಕರ್ತವ್ಯದಿಂದ ನುಣುಚಿಕೊಳ್ಳಬೇಡಿ ಎಂದು ಎಚ್ಚರಿಕೆ ನೀಡಿದರು. ರೈಲ್ವೆ ಹಳಿಗಳ ಮೇಲೆ ಕಸ ಹಾಕುವವರ ಮೇಲೆ ಕ್ರಮ ಕೈಗೊಳ್ಳಿ. ರೈಲ್ವೆಗೆ ಸಂಬಂಧಿಸಿದ ಜಾಗಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದು ನಿಮ್ಮ ಕರ್ತವ್ಯ. ಕೇಂದ್ರ ಸಕರ್ಾರದ ಸ್ವಚ್ಛತಾ ಅಭಿಯಾನ ನನ್ನ ಲೋಕಸಭಾ ಕ್ಷೇತ್ರದಲ್ಲಿ ಯಶಸ್ವಿಯಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಂಗಳೂರಿಗೆ ಸಂಬಂಧಿಸಿದ ರೈಲ್ವೆ ಯೋಜನೆಗಳನ್ನು ಪೂರ್ಣಗೊಳಿಸಲು ಒಂದು ಸಾವಿರ ಕೋಟಿ ರೂ. ಅಗತ್ಯವಿದೆ. ರೈಲ್ವೆ ಜಾಗವನ್ನು ಒತ್ತುವರಿ ಮಾಡಿಕೊಂಡಿರುವವರನ್ನು ಕಡ್ಡಾಯ ಶಿಕ್ಷೆಗೆ ಒಳಪಡಿಸಲಾಗುವುದು. ಈ ಸಂಬಂಧ ರೈಲ್ವೆ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡಲಾಗಿದೆ ಎಂದು ತಿಳಿಸಿದರು.
ರೈಲ್ವೆ ಹಳಿಗಳ ಮೇಲೆ ಕಸ ಹಾಕುವವರ ಮೇಲೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದರು.
ಬೆಂಗಳೂರಿನ 9 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ರೈಲ್ವೆ ಸಮಸ್ಯೆಗಳ ಬಗ್ಗೆ ಚಚರ್ಿಸಲಾಗಿದ್ದು, 28 ವಿಷಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಚಚರ್ೆ ಮಾಡಲಾಗಿದೆ.
ರೈಲ್ವೆ ಜಾಗದಲ್ಲಿ ಹಾದುಹೋಗಿರುವ ರಸ್ತೆಗಳ ದುರಸ್ತಿಗೆ ಅಧಿಕಾರಿಗಳು ಸಮ್ಮತಿಸಿದ್ದಾರೆ. ರೈಲ್ವೆ ಮೇಲ್ಸೇತುವೆ ಹಾಗೂ ಸ್ಕೈ ವಾಕ್ ನಿಮರ್ಾಣಕ್ಕೆ ವಿಶೇಷ ಅನುದಾನ ನೀಡಲು ರಾಜ್ಯ ಸಕರ್ಾರ ಸಮ್ಮತಿಸಿದೆ. ಅಂಡರ್ಪಾಸ್ ಅಥವಾ ಓವರ್ಬ್ರಿಡ್ಜ್ ನಿಮರ್ಾಣದಿಂದ ಬೆಂಗಳೂರಿನ ವಾಹನ ದಟ್ಟಣೆ ಶೇ.15ರಷ್ಟು ಕಡಿಮೆಯಾಗುತ್ತದೆ. ಶಾಸಕರು, ಜನಪ್ರತಿನಿಧಿಗಳನ್ನೊಳಗೊಂಡ ಸಮನ್ವಯ ಸಮಿತಿ ರಚಿಸಲಾಗುತ್ತದೆ ಎಂದು ಸದಾನಂದಗೌಡರು ತಿಳಿಸಿದರು.
ಸಭೆಯಲ್ಲಿ ಕೃಷಿ ಸಚಿವ ಕೃಷ್ಣಭೆರೇಗೌಡ, ಶಾಸಕರಾದ ಡಾ.ಅಶ್ವತ್ಥನಾರಾಯಣ, ವೈ.ಎ.ನಾರಾಯಣಸ್ವಾಮಿ, ವಿಶ್ವನಾಥ್, ಮುನಿರಾಜು ಸೇರಿದಂತೆ ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.
Discussion about this post