Read - < 1 minute
ಬೆಂಗಳೂರು, ಸೆ.19: ಒಂಬಡ್ಸುಮನ್ ವ್ಯವಸ್ಥೆಯೇ ತಲೆ ತಗ್ಗಿಸುವಂತೆ ಮಾಡಿದ್ದ ರಾಜ್ಯ ಲೋಕಾಯುಕ್ತದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಎಲ್ಲ ಆರೋಪಿಗಳಿಗೆ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ.
ಈ ಕುರಿತಂತೆ ಇಂದು ಜಾಮೀನು ಮಂಜೂರು ಮಾಡಿರುವ ನ್ಯಾಯಾಲಯ ಆರೋಪಿಗಳಿಗೆ ಕೆಲವು ಶರತ್ತುಗಳನ್ನು ಒಡ್ಡಿದೆ. ಆರೋಪಿಗಳು ೧ ಲಕ್ಷ ರೂ. ಬಾಂಡ್, ಭದ್ರತಾ ಶ್ಯೂರಿಟಿ, ಪಾಸ್‌ಪೋರ್ಟ್‌ಅನ್ನು ಎಸ್‌ಐಟಿ ತನಿಖಾಧಿಕಾರಿಗಳಿಗೆ ನೀಡಬೇಕು ಮತ್ತು ತನಿಖೆಗೆ ಸಹಕರಿಸಬೇಕು. ಸಾಕ್ಷ್ಯಗಳನ್ನು ನಾಶ ಪಡಿಸದಂತೆ ಹಾಗೂ ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು ಎಂದು ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಲಾಗಿದೆ. ಅಲ್ಲದೆ ಅನುಮತಿ ಇಲ್ಲದೆ ಊರು ಬಿಡದಂತೆ ನ್ಯಾಯಾಲಯ ಅರೋಪಿಗಳಿಗೆ ಎಚ್ಚರಿಕೆ ನೀಡಿದೆ.
ಅಂದಿನ ಲೋಕಾಯುಕ್ತ ನ್ಯಾಯಮೂರ್ತಿ ಭಾಸ್ಕರ್‌ರಾವ್ ಅವರ ಪುತ್ರ ಅಶ್ವಿನ್ ರಾವ್, ೪೨೦ ಭಾಸ್ಕರ್, ರಿಯಾಜ್ ಸೇರಿದಂತೆ ಎಲ್ಲ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಏಕ ಸದಸ್ಯ ಪೀಠ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
Discussion about this post