ನವದೆಹಲಿ, ಅ.೨೫: ದೇಶದಾದ್ಯಂತ ವರುಣ್ ಗಾಂಧಿ ಅವರ ಹನಿ ಟ್ರ್ಯಾಪ್ ಹಗರಣದ ಕುರಿತು ಭಾರಿ ಚರ್ಚೆಗಳು ಆರಂಭವಾಗಿರುವಂತೆಯೇ ಬಿಜೆಪಿ ಈ ಪ್ರಕರಣದಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ.
ವರುಣ್ ಗಾಂಧಿ ವಿರುದ್ಧ ಆರೋಪ ತೀರಾ ಗಂಭೀರ ಸ್ವರೂಪದ್ದಾಗಿದ್ದು, ಇದರಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುವ ಅಪಾಯವಿದೆ. ಇನ್ನು ಕೆಲವೇ ದಿನಗಳಲ್ಲಿ ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ಇದ್ದು, ಈ ಹಂತದಲ್ಲಿ ವರುಣ್ ಗಾಂಧಿ ವಿರುದ್ಧ ಹನಿ ಟ್ರ್ಯಾಪ್ ಪ್ರಕರಣ ಕೇಳಿಬಂದಿರುವುದು ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಹೀಗಾಗಿ ಪ್ರಕರಣದಿಂದ ಅಂತರ ಕಾಯ್ದುಕೊಳ್ಳಲು ಬಿಜೆಪಿ ನಿರ್ಧರಿಸಿದೆ ಎನ್ನಲಾಗುತ್ತಿದೆ.
ಈ ಹಿಂದೆ ರಾಷ್ಟ್ಯಾಧ್ಯಕ್ಷ ಅಮಿತ್ ಶಾ ಅವರ ನೇತೃತ್ವದಲ್ಲಿ ನಡೆದ ಬಿಜೆಪಿ ಉನ್ನತ ಮಟ್ಟದ ಸಭೆಯಲ್ಲಿ ಎಲ್ಲ ನಾಯಕರಿಗೆ ನಿರ್ದೇಶನ ನೀಡಲಾಗಿದ್ದು, ಹನಿ ಟ್ರಾಪ್ ಹಗರಣ ಸಂಬಂಧ ಯಾವುದೇ ರೀತಿಯ ಹೇಳಿಕೆ ನೀಡದಂತೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ.
Kriti Sanon’s Raksha Bandhan Ad Faces Backlash; GIVA Withdraws Campaign
Kalpa Media House | Bangalore | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...
Read moreDetails




