ವಾರಾಣಸಿ, ಅ.15: ಉತ್ತರ ಪ್ರದೇಶದ ವಾರಾಣಸಿ ಹಾಗೂ ಚಾಂಡೊಲಿ ನಡುವಿನ ರಾಜ್ ಘಾಟ್ ಸೇತುವೆ ಮೇಲೆ ಭೀಕರ ಕಾಲ್ತುಳಿತ ಸಂಭವಿಸಿದ್ದು, 19ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.
ಬಾಬಾ ಜೈ ಗುರುದೇವ ಬೆಂಬಲಿಗರು ರಾಜ್ ಘಾಟ್ ಸೇತುವೆ ಮೂಲಕ ಸಂಗಮಕ್ಕೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಾವನ್ನಪ್ಪಿದವರಲ್ಲಿ 15 ಮಂದಿ ಮಹಿಳೆಯರಾಗಿದ್ದು, 4 ಮಂದಿ ಪುರುಷರು ಎಂದು ತಿಳಿದುಬಂದಿದೆ. ಗಾಯಗೊಂಡವರ ಪೈಕಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Discussion about this post