ಹಾಸನ, ಅ.24: ರಾಜ್ಯದ ಆಡಳಿತ ಶಕ್ತಿಕೇಂದ್ರ ವಿಧಾನಸೌಧದಲ್ಲಿ ಜಪ್ತಿಯಾದ ೧.೯೭ ಕೋಟಿ ರೂಪಾಯಿ ಯಾರಿಗೆ ಸೇರಿದೆ ಎನ್ನುವುದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ತಿಳಿದಿದೆ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಹಾಸನಾಂಬೆ ದರ್ಶನ ಪಡೆದ ನಂತರ ಮಾತನಾಡಿದ ಅವರು, ಜಪ್ತಿಯಾದ ೧.೯೭ ಕೋಟಿ ಹಣದ ಬಗ್ಗೆ ಯಡಿಯೂರಪ್ಪನವರಿಗೆ ಸ್ಪಷ್ಟವಾದ ಮಾಹಿತಿ ಇದೆ. ಅವರನ್ನು ಪ್ರಶ್ನಿಸಿದರೆ ಹಣ ಯಾರದ್ದು ಎನ್ನುವುದು ತಿಳಿಯುತ್ತದೆ. ಪ್ರಕರಣಗಳ ಮಾಹಿತಿ ಬಿಡುಗಡೆ ಮಾಡುತ್ತಿರುವುದರಿಂದ ನನಗೆ ನಷ್ಟ ಆಗುತ್ತಿದೆ. ನನ್ನ ಮೇಲೆ ಕೇಸ್ ಹಾಕಲಾಗಿದೆ ಎಂದು ದೂರಿದ್ದಾರೆ.
ಶೇಷಾದ್ರಿಪುರಂನಲ್ಲಿರುವ ಅಪಾರ್ಟ್‌ಮೆಂಟ್ ಒಂದರಿಂದ ಹಣ ತರಲಾಗುತಿತ್ತು. ಆ ಅಪಾರ್ಟ್‌ಮೆಂಟ್‌ನಲ್ಲಿ ಪ್ರಭಾವಿ ರಾಜಕಾರಣಿಯೊಬ್ಬರ ಮಗನಿದ್ದಾನೆ ಎಂಬ ಮಾತುಗಳು ಕೇಳಿ ಬಂದ ಹಿನ್ನೆಲೆಯಲ್ಲೇ ಕುಮಾರಸ್ವಾಮಿ ಅವರು ಈ ಹೇಳಿಕೆ ತೀವ್ರ ಸಂಚಲನ ಮೂಡಿಸಿದೆ.
Discussion about this post