ಮೈಸೂರು, ಸೆ.6: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಮೈಸೂರು ಭಾಗದಲ್ಲಿ ಹೋರಾಟ ತೀವ್ರಗೊಂಡಿದೆ. ಇದರ ಬೆನ್ನಲ್ಲೇ, ನಾಳೆ ಹಾರಂಗಿ ಜಲಾಶಯದಿಂದ ನೀರು ಹರಿಸುವ ಸಾಧ್ಯತೆಯಿದೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ, ಸಮಗ್ರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ನಾಳೆ ಬೆಳಗ್ಗೆ 11 ಗಂಟೆಗೆ ಹಾರಂಗಿ ಜಲಾಶಯಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ.
ಈ ಕುರಿತಂತೆ ಟೈಮ್ಸ್ ಕನ್ನಡದೊಂದಿಗೆ ಮಾತನಾಡಿದ ಸಮಗ್ರ ಕರ್ನಾಟಕ ರಕ್ಷಣಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಅರವಿಂದ ಶರ್ಮಾ, ಹಾರಂಗಿ ಜಲಾಶಯದಿಂದ ನಾಳೆ ನೀರು ಹರಿಸುವ ಸಾಧ್ಯತೆಯಿದೆ ಎಂಬ ಮಾಹಿತಿ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ, ಈಗ್ಗೆ ಕೆಲವು ಗಂಟೆಗಳ ಹಿಂದೆ ಮಹತ್ವದ ಸಭೆ ನಡೆಸಲಾಗಿದೆ. ನೀರು ಬಿಡುವುದನ್ನು ತಡೆದು, ವಿರೋಧಿಸುವ ನಿಟ್ಟಿನಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ಹಾರಂಗಿ ಜಲಾಶಯಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ನಾಳಿನ ಮುತ್ತಿಗೆ ಪ್ರತಿಭಟನೆಗೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ.
News by: ಪುನೀತ್ ಕೂಡ್ಲೂರು, ಮೈಸೂರು















