Read - < 1 minute
ನವದೆಹಲಿ, ಸೆ.೭: ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ತಮಿಳುನಾಡು ಸಿಎಂ ಪದೇ ಪದೇ ಕ್ಯಾತೆ ತೆಗೆಯುತ್ತಿದ್ದು, ಇದಕ್ಕೆ ಪ್ರತಿಯಾಗಿ ತಮಿಳುನಾಡಿಗೆ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಚಾಟಿ ಬೀಸಿದ್ದಾರೆ.
ಕಾವೇರಿ ನೀರಿಗಾಗಿ ಗೋಗರೆಯುವ ಬದಲು ಸಮುದ್ರದ ನೀರನ್ನೇ ಶುದ್ದೀಕರಿಸಿ ಕೊಂಡು ಬಳಕೆ ಮಾಡುವಂತೆ ಅವರು ಹೇಳಿದ್ದಾರೆ. ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕಳೆದೊಂದು ವಾರದಿಂದ ಉಭಯ ರಾಜ್ಯಗಳಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಆಧಾರದ ಮೇಲೆ ಇಂದು ಬೆಳಿಗ್ಗೆ ಅವರು ಟ್ವೀಟ್ ಮಾಡಿದ್ದಾರೆ.
ಕಾವೇರಿ ನದಿ ನೀರಿಗಾಗಿ ತಮಿಳುನಾಡು ಸರ್ಕಾರ ಕರ್ನಾಟಕವನ್ನು ಗೋಗರೆ ಯುವುದನ್ನು ಬಿಡಬೇಕು. ಬದಲಿಗೆ ಸಮುದ್ರದ ನೀರನ್ನೇ ಶುದ್ದೀಕರಿಸಿಕೊಂಡು ಕುಡಿಯಲು ಹಾಗೂ ನೀರಾವರಿಗೆ ಬಳಸಿಕೊಳ್ಳಬೇಕು ಎಂದು ಹೇಳಿದ್ದಾರೆ.
ಸುಬ್ರಮಣಿಯನ್ ಸ್ವಾಮಿ ಅವರ ಈ ಟ್ವೀಟ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು, ಸಮುದ್ರದ ನೀರನ್ನು ಬಳಸಿಕೊಳ್ಳುವ ತಂತ್ರಜ್ಞಾನ ಭಾರತದಲ್ಲಿ ಚಾಲ್ತಿಯಲ್ಲಿದ್ದರೂ ಅದರ ಬಳಕೆಗೆ ಮಾತ್ರ ಸರ್ಕಾರಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಜನರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
Discussion about this post