ಬೆಂಗಳೂರು, ಸೆ.28: ರಾಜ್ಯ ಸರ್ಕಾರದ ನೂತನ ಮುಖ್ಯಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಸುಭಾಷ್ ಕುಂಟಿಯಾ ಆಯ್ಕೆಯಾಗಿದ್ದಾರೆ.
ಹಾಲಿ ಮುಖ್ಯಕಾರ್ಯದರ್ಶಿ ಅರವಿಂದ ಜಾದವ್ ಅವರ ವಿಸ್ತರಣಾ ಅವಧಿ ಈ ತಿಂಗಳ ಅಂತ್ಯಕ್ಕೆ ಮುಕ್ತಾಯಗೊಳ್ಳಲಿದ್ದು, ಅವರಿಂದ ತೆರವಾಗಲಿರುವ ಸ್ಥಾನಕ್ಕೆ ಸುಭಾಷ್ ಅವರನ್ನು ಆಯ್ಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕುಂಟಿಯಾ ಪ್ರಸ್ತುತ ಕೇಂದ್ರ ಸರ್ಕಾರದ ಸಾಕ್ಷರತೆ ಮತ್ತು ಶಾಲಾ ಶಿಕ್ಷಣ ಇಲಾಖೆಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಸೇವಾ ಹಿರಿತನದಲ್ಲಿ ಕುಪೇಂದ್ರ ತ್ರಿಪಾಠಿ ಮೊದಲಿಗರಾಗಿದ್ದರು. ಅವರೂ ಕೂಡ ಕೇಂದ್ರ ಸರ್ಕಾರದ ನವೀಕರಣ ಇಂಧನ ಸಚಿವಾಲಯದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಅವರ ಸೇವಾವಧಿ ಕೇವಲ ಒಂದು ತಿಂಗಳಿದ್ದು, ಅಕ್ಟೋಬರ್ ಅಂತ್ಯಕ್ಕೆ ವಯೋನಿವೃತ್ತಿ ಹೊಂದಲಿದ್ದಾರೆ. ಕುಂಟಿಯಾ ಅವರಿಗೆ ಒಂದು ವರ್ಷ ಎರಡು ತಿಂಗಳ ಸೇವಾವಧಿ ಸಿಗಲಿದೆ. ಹೀಗಾಗಿ ರಾಜ್ಯ ಸರ್ಕಾರ ತ್ರಿಪಾಠಿ ಅವರ ಬದಲಿಗೆ ಕುಂಟಿಯಾ ಅವರನ್ನು ನೇಮಕ ಮಾಡಿಕೊಂಡಿದೆ.
ಮುಖ್ಯಕಾರ್ಯದರ್ಶಿ ಹುದ್ದೆಗೆ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿರುವ ಕೆ. ರತ್ನಪ್ರಭಾ ಅವರು ಕೂಡ ಆಕಾಂಕ್ಷಿಯಾಗಿದ್ದರು.
Discussion about this post