Read - < 1 minute
ನವದೆಹಲಿ:ಸೆ:30: ಪಾಕಿಸ್ತಾನದ ವಿರುದ್ಧ ಭಾರತೀಯ ಸೇನೆ ನಡೆಸಿದ ಸರ್ಜಿಕಲ್ ದಾಳು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನಡೆಯನ್ನು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಶ್ಲಾಘಿಸಿದ್ದಾರೆ.
ಪಾಕ್ ಆಕ್ರಮಿತ ಪ್ರದೇಶಕ್ಕೆ ನುಗ್ಗಿ, ಉಗ್ರರ ನೆಲೆಗಳನ್ನು ಧ್ವಂಸಮಾಡಿ, 38 ಭಯೋತ್ಪಾದಕರನ್ನು ಹತ್ಯೆಗೈದ ಭಾರತೀಯ ಸೇನೆಯ ದಿಟ್ಟ ಸರ್ಜಿಕಲ್ ದಾಳಿ ಕಾರ್ಯಾಚರಣೆಗಾಗಿ ಶ್ಲಾಘನೆ ವ್ಯಕ್ತಪಡಿಸಿರುವ ರಾಹುಲ್ ಗಾಂಧಿ, ಭಾರತೀಯ ಸೇನೆಯ ಸೀಮಿತ ದಾಳಿ ನಿಜಕ್ಕೂ ಪ್ರಶಂಸನಿಯವಾಗಿದೆ ಎಂದಿದ್ದಾರೆ.
ಅಲ್ಲದೇ ಎರಡೂವರೆ ವರ್ಷಗಳಲ್ಲಿ ಪ್ರಥಮ ಬಾರಿಗೆ ಪ್ರಧಾನಿ ಭಯೋತ್ಪಾದನೆ ವಿರುದ್ಧ ದಿಟ್ಟ ನಿಲುವಿನ ಕ್ರಮವನ್ನು ಕೈಗೊಂಡಿರುವುದಕ್ಕಾಗಿ ನಾನು ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ನನ್ನ ಪಕ್ಷ ಮತ್ತು ನಾನು ಈ ವಿಚಾರದಲ್ಲಿ ಅವರ ಜೊತೆಗೆ ನಿಲ್ಲುತ್ತೇವೆ ಎಂದು ಹೇಳಿದ್ದಾರೆ.
ಭಾರತೀಯ ಸೇನೆ ಗಡಿ ನಿಯಂತ್ರಣ ರೇಖೆಯನ್ನು ದಾಟಿ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಅಲ್ಲಿದ್ದ 7 ಉಗ್ರ ಕ್ಯಾಂಪ್ ಗಳನ್ನು ಯಶಸ್ವಿಯಾಗಿ ಧ್ವಂಸಗೊಳಿಸಿದ್ದರು. ಕೇವಲ 4 ಗಂಟೆಯಲ್ಲಿ 38 ಉಗ್ರರನ್ನು ಹಾಗೂ 6 ಮಂದಿ ಪಾಕ್ ಸೈನಿಕರನ್ನು ಹತ್ಯೆಮಾಡುವ ಮೂಲಕ ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿದ್ದರು.
Discussion about this post