ನವದೆಹಲಿ: ಅ:14: ದೇಶದ ಪ್ರಥಮ ಗೃಹಮಂತ್ರಿ ಮತ್ತು ಉಕ್ಕಿನ ಮನುಷ್ಯ ಎಂದು ಬಿರುದು ಇರುವ ಸರ್ದಾರ್ ವಲ್ಲಭಾಯಿ ಪಟೇಲ್ ಅವರ ಜನ್ಮದಿನವನ್ನು `ರಾಷ್ಟ್ರೀಯ ಐಕ್ಯತಾ ದಿನ’ವಾಗಿ ಆಚರಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.
ಅ.31ರಂದು ಸರ್ದಾರ್ ವಲ್ಲಭಾಯಿ ಪಟೇಲ್ ಅವರ 141ನೇ ಜನ್ಮದಿನವನ್ನು ದೇಶಾದ್ಯಂತ ಅದ್ಧೂರಿಯಾಗಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿರ್ಧರಿಸಿದೆ.
ಪಟೇಲರ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಪಟೇಲರ ಕುರಿತು ಡಿಜಿಟಲ್ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಸದೃಢ ಭಾರತ ದೇಶವನ್ನಾಗಿ ಮಾಡುವಲ್ಲಿ ವಲ್ಲಭಾಯಿ ಪಟೇಲರು ಪ್ರಮುಖ ಪಾತ್ರ ವಹಿಸಿದ್ದರು. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ಮೇಲೆ ಸುಮಾರು 500ಕ್ಕೂ ಹೆಚ್ಚು ರಾಜಸಂಸ್ಥಾನಗಳನ್ನು ಭಾರತ ಒಕ್ಕೂಟ ವ್ಯವಸ್ಥೆಗೆ ಸೇರಿಸುವಲ್ಲಿ ಯಶಸ್ವಿಯಾಗಿದ್ದರು.
ಇವರ ನೆನಪಿಗಾಗಿ ಮೋದಿ ನರ್ಮದಾ ನದಿ ತೀರದಲ್ಲಿ ಸದರ್ಾರ್ ವಲ್ಲಭಾಯಿ ಪಟೇಲ್ರ ಅತಿ ಎತ್ತರದ ಉಕ್ಕಿನ ಪ್ರತಿಮೆ ನಿರ್ಮಿಸಲು ಐತಿಹಾಸಿಕ ಯೋಜನೆಯನ್ನು ಆರಂಭಿಸಿದ್ದಾರೆ.
Rani KoHEnur Calls Transgender Bill “Absurd”, Questions Lawmakers in Explosive Podcast Interview
Kalpa Media House | Mumbai | Artist, drag performer, and activist Rani KoHEnur (Sushant Divgikar) has ignited widespread conversation following...
Read moreDetails













