ಮಂಡ್ಯ, ಆ.30– ಸೆಪ್ಟೆಂಬರ್ 2ರಂದು ಇಲ್ಲಿನ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯಲಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ಕುಮಾರ್ಗಾಗಿ ನಿರ್ಮಿಸುತ್ತಿರುವ ಚನ್ನಾಂಬಿಕಾ ಕಂಬೈನ್ಸ್ರವರ ಜಾಗ್ವಾರ್ ಸಿನಿಮಾ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಈ ಚಿತ್ರದ ಪ್ರಚಾರಕ್ಕಾಗಿ ಜಿಲ್ಲಾದ್ಯಂತ ತೆರಳುವ ವಾಹನಗಳಿಗೆ ಸಂಸದ ಸಿ.ಎಸ್.ಪುಟ್ಟರಾಜು ಚಾಲನೆ ನೀಡಿದ್ದಾರೆ. ನಿನ್ನೆ ಮಧ್ಯಾಹ್ನ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ವಾಹನ ಚಲಾಯಿಸುವ ಮೂಲಕ ಚಾಲನೆ ನೀಡಿದ್ದಾರೆ.
ಮಂಡ್ಯ ಜಿಲ್ಲೆಯ ಮಣ್ಣಿನಲ್ಲಿ ಈ ಚಿತ್ರದ ಧ್ವನಿ ಸುರುಳಿ ಬಿಡುಗಡೆ ಮಾಡಬೇಕೆಂದು ಅಭಿಮಾನಿಗಳು ಹಾಗೂ ಕಾರ್ಯಕರ್ತರು ಒತ್ತಾಯ ಮಾಡಿದ್ದರು. ಹೀಗಾಗಿ ಸೆ.2ರಂದು ನಡೆಯಲಿರುವ ಸಮಾರಂಭದಲ್ಲಿ ಹಿರಿಯ ಕಲಾವಿದರು, ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳು ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಆರ್ಥಿಕ ಸಹಾಯ ಮಾಡುವ ಕಾರ್ಯಕ್ರಮವೂ ಇದೆ.
ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಪತ್ನಿ ಅನಿತಾ ಕುಮಾರಸ್ವಾಮಿ, ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಅಪ್ಪಾಜಿಗೌಡ, ಮಾಜಿ ಶಾಸಕ ಎಂ.ಶ್ರೀನಿವಾಸ್, ಜಿಲ್ಲೆಯ ಜನತಾದಳ ಅಧ್ಯಕ್ಷ ಡಿ.ರಮೇಶ್, ಕನ್ನಡ ಚಿತ್ರರಂಗದ ಹಿರಿಯ ನಟರು, ಕಲಾವಿದರು ಪಾಲ್ಗೊಂಡಿದ್ದರು.
Discussion about this post