ಶಿವಮೊಗ್ಗ, ಅ.3: ಅಡಕೆಗೆ ಬೆಂಬಲ ಬೆಲೆ ನೀಡುವ ಮೂಲಕ ರೈತರ ಹಿತಕಾಯಬೇಕು ಎಂದು ಕೇಂದ್ರ ವಾಣಿಜ್ಯ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಶಿವಮೊಗ್ಗ ಜಿಲ್ಲಾ ಬಿಜೆಪಿ ನಿಯೋಗ ಮನವಿ ಸಲ್ಲಿಸಿತು.
ಬೆಳಗಾವಿಯಲ್ಲಿ ಸಚಿವೆಯನ್ನು ಭೇಟಿ ಮಾಡಿದ ಜಿಲ್ಲಾಧ್ಯಕ್ಷ ರುದ್ರೇಗೌಡರ ನೇತೃತ್ವದ ನಿಯೋಗ ಅಡಕೆಗೆ ಬೆಂಬಲ ಬೆಲೆ ನೀಡಿ ಎಂದು ಮನವಿ ಮಾಡಿತು. ಇದಕ್ಕೆ ಸ್ಪಂದಿಸಿದ ಸಚಿವರು ಈ ಕುರಿತಂತೆ ಆಗಿರುವ ಬೆಳವಣಿಗೆಗಳ ಮಾಹಿತಿಯನ್ನು ರಾಜ್ಯಾದ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ವಿವರಿಸಿದ್ದು, ಈ ಸಂಬಂಧ ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ನಿಯೋಗದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೇಘರಾಜ್, ಡಿ.ಎಸ್. ಅರುಣ್, ದತ್ತಾತ್ರಿ, ಎಸ್.ಎನ್. ಚನ್ನಬಸಪ್ಪ(ಚೆನ್ನಿ) ಸೇರಿದಂತೆ ಹಲವರಿದ್ದರು.














