No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Sunday, August 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಕಾವೇರಿ ನಿರ್ಣಯ: ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆಗೆ ತಮಿಳುನಾಡು ನಿರ್ಧಾರ

kalpa News by kalpa News
September 24, 2016
in ರಾಷ್ಟ್ರೀಯ
0
Share on FacebookShare on TwitterShare on WhatsApp
ಬೆಂಗಳೂರು, ಸೆ.24-ಕಾವೇರಿ ಜಲಾಶಯದಲ್ಲಿ ಸಂಗ್ರಹವಾಗಿರುವ ನೀರನ್ನು ಕುಡಿಯುವ ಬಳಕೆ ಮಾಡಿಕೊಳ್ಳಲಾಗುವುದೆಂಬ ಶುಕ್ರವಾರ ವಿಧಾನಮಂಡಲದ ಉಭಯ ಸದನಗಳಲ್ಲಿ ಕೈಗೊಂಡಿದ್ದ ನಿರ್ಣಯದ ವಿರುದ್ದ ಸುಪ್ರೀಂಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ತಮಿಳುನಾಡು ಮುಂದಾಗಿದೆ.
ಈ ಮೂಲಕ ಮತ್ತೆ ತಮಿಳುನಾಡು ಕರ್ನಾಟಕದ ವಿರುದ್ದ ಕಾನೂನು ಸಮರ ಸಾರಲು ಸಿದ್ಧತೆ ನಡೆಸಿದೆ.
ಮಂಗಳವಾರ ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠದಲ್ಲಿ ಮುಂದುವರೆದ ಅರ್ಜಿ ವಿಚಾರಣೆ ನಡೆಯಲಿದೆ. ಈಗಾಗಲೇ ಮೇಲುಸ್ತುವಾರಿ ಸಮಿತಿ ಪ್ರತಿದಿನ ಮೂರು ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ನೀಡಿರುವ ಆದೇಶದ ವಿರುದ್ದ ಶುಕ್ರವಾರ ತಮಿಳು ಆಕ್ಷೇಪಣೆ ಅರ್ಜಿ ಸಲ್ಲಿಸಿತ್ತು.
ಮಂಗಳವಾರ ಅರ್ಜಿ ವಿಚಾರನೆ ನಡೆಯುವ ಸಾಧ್ಯತೆಯಿದ್ದು , ಅಂದೇ ಕರ್ನಾಟಕದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ವಕೀಲರು ಕಾರ್ಯೋನ್ಮುಖರಾಗಿದ್ದಾರೆ.
ಸುಪ್ರೀಂಕೋರ್ಟ್ ನಲ್ಲಿ ತಮಿಳುನಾಡು ಪರ ವಾದ ಮಂಡಿಸುತ್ತಿರುವ ಹಿರಿಯ ವಕೀಲ ಶೇಖರ್ ನಪಾಡೆ ಅವರು ಮತ್ತೋರ್ವ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಜೊತೆ ಮಾತುಕತೆ ನಡೆಸಿದ್ದಾರೆ.
ಶುಕ್ರವಾರ ಕರ್ನಾಟಕದ ವಿಧಾನ ಮಂಡಲದಲ್ಲಿ ತಮಿಳುನಾಡಿಗೆ ನೀರು ಹರಿಸದೆ ಸದ್ಯಕ್ಕೆ ಸಂಗ್ರಹಣವಾಗಿರುವ ನೀರನ್ನು ಕುಡಿಯುವುದಕ್ಕಾಗಿ ಬಳಕೆ ಮಾಡಿಕೊಳ್ಳಲು ವಿಧಾನಪರಿಷತ್ ಮತ್ತು ವಿಧಾನಸಭೆಯಲ್ಲಿ ಒಂದು ಸಾಲಿನ ನಿರ್ಣಯ ಕೈಗೊಂಡಿತ್ತು.
ಇದು ಸ್ಪಷ್ಟ ನ್ಯಾಯಾಂಗ ನಿಂದನೆಯಾಗಿದ್ದು , ಕರ್ನಾಟಕದ ಮೇಲೆ ಕಾನೂನು ಕ್ರಮ ಜರುಗಿಸುವ ಬಗ್ಗೆಯೂ ಪ್ರಶಾಂತ್ ಭೂಷಣ್ ಜೊತೆ ಈಗಾಗಲೇ ಶೇಖರ್ ನಪಾಡೆ ಅಗತ್ಯ  ಮಾಹಿತಿಗಳನ್ನು ಕಲೆ ಹಾಕಿದ್ದಾರೆ.
ಈ ಹಿಂದೆ ಪಂಜಾಬ್ ಮತ್ತು ಹರ್ಯಾಣ ನಡುವೆ ಅಂತರಾಜ್ಯ ನದಿ ನೀರು ಹಂಚಿಕೆ ವಿವಾದ ಉಂಟಾದಾಗ ಸುಪ್ರೀಂಕೋರ್ಟ್ ನೀಡಿದ ತೀರ್ಪನ್ನು ಉಲ್ಲಂಘಿಸಿ ಪಂಜಾಬ್ ವಿಧಾನಸಭೆಯಲ್ಲಿ ಒಂದು ಸಾಲಿನ ನಿರ್ಣಯ ಕೈಗೊಳ್ಳಲಾಗಿತ್ತು.
ಆಗ ಸುಪ್ರೀಂಕೋರ್ಟ್ ಪಂಜಾಬ್ ವಿಧಾನಸಭೆಯಲ್ಲಿ ಅಂಗೀಕೃತವಾಗಿದ್ದ ನಿರ್ಣಯವನ್ನು ಅನೂರ್ಜಿತ ಎಂದು ಹೇಳಿ ನಿಮ್ಮ ಸರ್ಕಾರವನ್ನು ಏಕೆ ಕಿತ್ತು ಹಾಕಬಾರದು ಎಂದು ಪ್ರಶ್ನೆ ಮಾಡಿತು. ಬಳಿಕ ಅಲ್ಲಿನ ಸರ್ಕಾರ ನ್ಯಾಯಾಲಯದ ಕ್ಷಮಾಪಣೆ ಕೇಳಿತ್ತು.
ಸಟ್ಲೇಜ್ ನದಿ ನೀರು ಹಂಚಿಕೆ ಸಂಬಂಧ ನ್ಯಾಯಾಲಯ ನೀಡಿರುವ ಆದೇಶವನ್ನು ಸ್ಪಷ್ಟವಾಗಿ ಪಾಲಿಸಬೇಕು. ಇಲ್ಲದಿದ್ದರೆ ನ್ಯಾಯಾಂಗ ನಿಂದನೆಯಾಗುತ್ತದೆ ಎಂದು ಎಚ್ಚರಿಕೆ ನೀಡಿತ್ತು. ಇದೀಗ ಶುಕ್ರವಾರ ವಿಧಾನಮಂಡಲದಲ್ಲಿ ನ್ಯಾಯಾಲಯದ ಆದೇಶವನ್ನು ಧಿಕ್ಕರಿಸುವುದಿಲ್ಲ ಬಗ್ಗೆ ಎಲ್ಲಿಯೂ ರಾಜ್ಯ ಸರ್ಕಾರ ಉಲ್ಲೇಖ ಮಾಡಿಲ್ಲ.
ನಮ್ಮಲ್ಲಿರುವ ನೀರನ್ನು ಕುಡಿಯುವುದಕ್ಕಾಗಿ ಬಳಕೆ ಮಾಡಿಕೊಳ್ಳುತ್ತೇವೆ. ಒಕ್ಕೂಟ ವ್ಯವಸ್ಥೆಯಲ್ಲಿ ನ್ಯಾಯಾಲಯದ ಆದೇಶವನ್ನು ಪಾಲನೆ ಮಾಡುತ್ತೇವೆ. ಆದರೆ ಜಲಾಶಯಗಳಲ್ಲಿ ನೀರೆ ಇಲ್ಲದಿರುವಾಗ ನೀರು ಹರಿಸಿರುವುದು ಸಾಧ್ಯವಿಲ್ಲ ಎಂಬ ನಿರ್ಣಯ ಕೈಗೊಂಡಿದೆ.
ನ್ಯಾಯಾಲಯದ ಆದೇಶದ ವಿರುದ್ಧ ಉಭಯ ಸದನಗಳಲ್ಲಿ ಟೀಕೆ ಮಾಡಿದಿದ್ದರೂ ಆದೇಶವನ್ನು ಪಾಲನೆ ಮಾಡದಿರುವುದು ನ್ಯಾಯಾಂಗ ನಿಂದನೆಯಾಗುತ್ತದೆ ಎಂದು ಖ್ಯಾತ ವಕೀಲ ಪ್ರಶಾಂತ್ ಭೂಷಣ್ ಅಭಿಪ್ರಾಯಪಟ್ಟಿದ್ದಾರೆ.
ಇದಕ್ಕೆ ಪುಷ್ಟಿ ನೀಡುವಂತೆ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಂ.ಕೆ.ಗಂಗೂಲಿ ಕೂಡ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಒಕ್ಕೂಟ ವ್ಯವಸ್ಥೆಯಲ್ಲಿ ನ್ಯಾಯಾಲಯದ ಆದೇಶಗಳನ್ನು ಪಾಲನೆ ಮಾಡುವುದು ಚುನಾಯಿತ ಸರ್ಕಾರದ ಆದ್ಯ ಕರ್ತವ್ಯ. ಈ ರೀತಿ ಸಬೂಬು ಹೇಳುವುದು ಸರಿಯಲ್ಲ ಎಂದು ಹೇಳಿದ್ದಾರೆ.
ವಿಧಾನಮಂಡಲದಲ್ಲಿ ತೆಗೆದುಕೊಂಡಿರುವ ನಿರ್ಣಯವನ್ನು ಒಪ್ಪಲು ಸಾಧ್ಯವೇ ಇಲ್ಲ. ಹೀಗೆ ಪ್ರತಿಯೊಂದು ರಾಜ್ಯಗಳು ಸದನದ ಹಕ್ಕುಚ್ಯುತಿಯಾಗುತ್ತದೆ ಎಂದು ನಿರ್ಣಯ ಕೈಗೊಂಡರೆ ನ್ಯಾಯಲಯದ ಆದೇಶವನ್ನು ಪಾಲನೆ ಮಾಡುವುದು ಯಾರು ಎಂದು ಅನೇಕ ನ್ಯಾಯವಾದಿಗಳು ಪ್ರಶ್ನಿಸಿದ್ದಾರೆ.
ಅರ್ಜಿ ಸಲ್ಲಿಕೆ: ಕರ್ನಾಟಕ ಸರ್ಕಾರದ ವಿರುದ್ದ ತಮಿಳುನಾಡು ಮಂಗಳವಾರದ ನಂತರ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇದೆ. ಹಾಗೊಂದು ವೇಳೆ ಸುಪ್ರೀಂಕೋರ್ಟ್ ಇದನ್ನು ಗಂಭೀರವಾಗಿ ಪರಿಗಣಿಸಿದರೆ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗುತ್ತವೆ. 
ಸರ್ಕಾರದ ಮುಖ್ಯ ಕಾರ್ಯದರ್ಶಿ ಇಲ್ಲವೆ ಮುಖ್ಯಮಂತ್ರಿ ಕಾನೂನು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ.
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಉಡುಪಿ: ದ್ವಿಚಕ್ರ ವಾಹನಕ್ಕೆ ಟ್ಯಾಕ್ಟರ್ ಡಿಕ್ಕಿ ಮಹಿಳೆ ಸಾವು

Next Post

ಸೌದಿ ಅರೇಬಿಯಾ ವಿರುದ್ಧದ ಮಸೂದೆಗೆ ಒಬಾಮಾ ವಿಟೋ

kalpa News

kalpa News

Next Post

ಸೌದಿ ಅರೇಬಿಯಾ ವಿರುದ್ಧದ ಮಸೂದೆಗೆ ಒಬಾಮಾ ವಿಟೋ

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL