No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Sunday, August 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ಕಾವೇರಿ ವಿವಾದ: ಮಧ್ಯಸ್ಥಿಕೆಗೆ ಕೇಂದ್ರ ಆಸಕ್ತಿ

kalpa News by kalpa News
September 19, 2016
in ರಾಜಕೀಯ, ರಾಷ್ಟ್ರೀಯ
0
Share on FacebookShare on TwitterShare on WhatsApp
ಬೆಂಗಳೂರು, ಸೆ.19: ಸಾರ್ವಜನಿಕರು, ಸಂಘಟನೆಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಒತ್ತಡಕ್ಕೆ ಮಣಿದಿರುವ ಕೇಂದ್ರ ಸರ್ಕಾರ ಕೊನೆಗೂ ಕಾವೇರಿ ಸಮಸ್ಯೆ ಇತ್ಯರ್ಥಕ್ಕೆ ಮಧ್ಯಪ್ರವೇಶ ಮಾಡಲು ಮುಂದೆ ಬಂದಿದೆ.
ಆದರೆ, ಪ್ರಧಾನಿ ನರೇಂದ್ರ ಮೋದಿ  ಈ ವಿಷಯಲ್ಲಿ ನೇರ ಪ್ರವೇಶ ಮಾಡದೆ ಕೇಂದ್ರದ ಬೃಹತ್ ಜಲಸಂಪನ್ಮೂಲ ಸಚಿವೆ ಉಮಾಭಾರತಿ ಮಧ್ಯಸ್ಥಿಕೆಗೆ ಆಸಕ್ತಿ ವಹಿಸಿದ್ದಾರೆ.
ಪ್ರಧಾನಿ ಅವರ ಸೂಚನೆಯಂತೆ ಉಮಾಭಾರತಿ ಅವರು ಕನರ್ಾಟಕ ಮತ್ತು ತಮಿಳುನಾಡು ಮುಖ್ಯಮಂತ್ರಿಗಳ ಸಭೆ ಕರೆಯಲು ತೀರ್ಮಾನಿಸಿದ್ದಾರೆ. ಜತೆಗೆ  ನೀರಾವರಿ ಸಚಿವರು, ಮುಖ್ಯಕಾರ್ಯದರ್ಶಿಗಳು ಭಾಗವಹಿಸುವಂತೆ ಈಗಾಗಲೇ ಎರಡೂ ರಾಜ್ಯಗಳಿಗೆ ಕೇಂದ್ರದಿಂದ ಪತ್ರ ಬಂದಿದೆ.
ಪ್ರಧಾನಿ ಮಧ್ಯಪ್ರವೇಶ ಮಾಡುವ ಇಂಗಿತ ಹೊಂದಿದ್ದರು. ಆದರೆ, ಜಮ್ಮು-ಕಾಶ್ಮೀರದ ಉರಿ ಸೇನಾಶಿಬಿರದ ಮೇಲೆ ಪಾಕಿಸ್ತಾನದ ಉಗ್ರರು ದಾಳಿ ನಡೆಸಿ ಭಾರೀ ದುಷ್ಕೃತ್ಯ ಎಸಗಿರುವ ಹಿನ್ನೆಲೆಯಲ್ಲಿ ಮೋದಿ ಅವರು ಉಮಾಭಾರತಿ ಅವರಿಗೆ ಸಮಸ್ಯೆ ಕಡೆಗೆ ಗಮನ ಹರಿಸುವಂತೆ ಸೂಚನೆ ಕೊಟ್ಟಿದ್ದಾರೆ ಎನ್ನಲಾಗಿದೆ.
ಗೃಹ ಇಲಾಖೆ, ರಕ್ಷಣೆ, ರಾಷ್ಟ್ರೀಯ ಭದ್ರತಾ ಸಲಹೆಗಾರರು, ಗುಪ್ತಚರ, ಸಂಶೋಧನೆ ಮತ್ತು ವಿಶ್ಲೇಷಣೆ, ಸೇನಾ ಪಡೆಯ ಮುಖ್ಯಸ್ಥರು ಹಾಗೂ ಪಾಕ್ ವಿರುದ್ಧ ಹೋರಾಟಕ್ಕೆ ವಿಶ್ವದ ಮೇಲೆ ಒತ್ತಡ ಹೇರಬೇಕಾದ ಅನಿವಾರ್ಯತೆ ಮೋದಿಗೆ ಎದುರಾಗಿದೆ. ಹೀಗಾಗಿ ಅವರು ಇನ್ನೂ 15 ದಿನಗಳ ಕಾಲ ದೇಶದ ಯಾವುದೇ ಮುಖ್ಯಮಂತ್ರಿ ಹಾಗೂ ಸಚಿವರನ್ನು ಭೇಟಿ ಮಾಡದಿರಲು ತೀರ್ಮಾನಿಸಿದ್ದಾರೆ.

ಉಮಾಭಾರತಿಗೆ ಹೊಣೆಗಾರಿಕೆ:

ಕರ್ನಾಟಕ ಮತ್ತು ತಮಿಳುನಾಡು ನಡುವೆ ಜಲಸಂಘರ್ಷ ಸೃಷ್ಟಿಸಿರುವ ಕಾವೇರಿ ನದಿ ನೀರು ಹಂಚಿಕೆಯನ್ನು ಸೌಹಾರ್ದಯುತವಾಗಿ ಪರಿಹರಿಸಲು ಮುಂದಾಗುವಂತೆ ಪ್ರಧಾನಿಯವರೇ ಖುದ್ದು ಉಮಾಭಾರತಿ ಅವರಿಗೆ ನಿರ್ದೇಶನ ನೀಡಿದ್ದಾರೆ.
ಪ್ರಧಾನಿ ಅವರ ಸೂಚನೆ ಮೇರೆಗೆ ಕರ್ನಾಟಕದ ಕಾವೇರಿ ಜಲಾನಯನ ತೀರ ಪ್ರದೇಶದಲ್ಲಿರುವ ಕೆಆರ್ ಎಸ್, ಕಬಿನಿ, ಹಾರಂಗಿ ಮತ್ತು ಹೇಮಾವತಿ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರಿನ ಮಟ್ಟದ ಬಗ್ಗೆ ಈಗಾಗಲೇ ಮಾಹಿತಿ ಪಡೆದಿದ್ದಾರೆ.

ಗುಪ್ತಚರ ತಂಡ ಆಗಮನ:

ಮೂಲಗಳ ಪ್ರಕಾರ ಕೇಂದ್ರದ ಒಂದು ತಂಡ ರಾಜ್ಯದ ಈ ನಾಲ್ಕು ಜಲಾಶಯಗಳಿಗೆ ಸದ್ದಿಲ್ಲದೆ ಭೇಟಿ ನೀಡಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬುದರ ಬಗ್ಗೆ ಅಧಿಕಾರಿಗಳಿಂದ ಗೋಪ್ಯ ಮಾಹಿತಿ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಕುಡಿಯುವ ನೀರು, ಕೃಷಿ ಚಟುವಟಿಕೆಗಳಿಗೆ ಬಳಕೆ, ಈ ಜಲಾಶಗಳ ಮೇಲೆ ಅವಲಂಬಿತವಾಗಿರುವ ನಗರಗಳ ಜನಸಂಖ್ಯೆ ಇತ್ಯಾದಿ ವಿವರಗಳನ್ನು ಗುಪ್ತಚರ ಇಲಾಖೆ ತಂಡ ಮಾಹಿತಿ ಪಡೆದಿದೆ.

ಮೆಟ್ಟೂರಿಗೂ ಭೇಟಿ:

ಇನ್ನು ಇದೇ ತಂಡ ತಮಿಳುನಾಡಿನ ಮೆಟ್ಟೂರು ಜಲಾಶಯಕ್ಕೂ ಭೇಟಿ ನೀಡಿ ನೀರು ಸಂಗ್ರಹವಾಗಿರುವ ಬಗ್ಗೆ ಅಗತ್ಯ ಮಾಹಿತಿ ಮತ್ತು ಅಂಕಿ-ಅಂಶಗಳನ್ನು ಕಲೆ ಹಾಕಿದೆ.  ಇದರ ಜತೆಗೆ ನೀರಾವರಿ ಇಲಾಖೆಯ ಅಧಿಕಾರಿಗಳ ತಂಡ ಸದ್ದಿಲ್ಲದೆ ಎರಡೂ ರಾಜ್ಯಗಳಿಗೂ ಭೇಟಿ ಕೊಟ್ಟು ಸಂಪೂರ್ಣ ಮಾಹಿತಿಯನ್ನು ಉಮಾಭಾರತಿ ಅವರಿಗೆ ನೀಡಿದೆ ಎಂದು ತಿಳಿದು ಬಂದಿದೆ.

ಕೋರ್ಟ್ ಮೇಲೆ ಅವಲಂಬನೆ:

ಕರ್ನಾಟಕ ಮತ್ತು ತಮಿಳುನಾಡು ನದಿ ನೀರು ಹಂಚಿಕೆ ಸಂಬಂಧ ದೆಹಲಿಯಲ್ಲಿ ಇಂದು ಕಾವೇರಿ ಮೇಲುಸ್ತುವಾರಿ ಸಮಿತಿ ಸಭೆ ನಡೆದಿದೆ. ಜೂನ್, ಜುಲೈ ಮತ್ತು ಆಗಸ್ಟ್ ತಿಂಗಳ  ಅವಧಿಯಲ್ಲಿ ಸಂಕಷ್ಟ ಸೂತ್ರದ ಪ್ರಕಾರ ಕರ್ನಾಟಕ ನೀರು ಹರಿಸಿಲ್ಲ. ಬಾಕಿ ಉಳಿದಿರುವ ನೀರನ್ನು ತನ್ನ ರಾಜ್ಯಕ್ಕೆ ಹರಿಸಲು ನಿರ್ದೇಶನ ನೀಡಬೇಕೆಂದು ತಮಿಳುನಾಡು ಸಮಿತಿಗೆ ವಿಶೇಷ ಅರ್ಜಿ ಸಲ್ಲಿಸಿದೆ.
ಸಮಿತಿಯು ಪುನಃ ತಮಿಳುನಾಡಿಗೆ ನೀರು ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಲಿದೆಯೋ ಇಲ್ಲವೇ ನಾಳೆ ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಸಿರುವ ಮಾರ್ಪಾಡು ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಲಲಿತ್ ಉದಯ್ ಮತ್ತು ದೀಪಕ್ ಮಿಶ್ರಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಕೈಗೆತ್ತಿಕೊಳ್ಳಲಿದೆ.
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭಾಸ್ಕರ ಶೆಟ್ಟಿ ಕೊಲೆ – ನವನೀತ್ ಶೆಟ್ಟಿ – ನಿರಂಜನ ಭಟ್ಟ ಪೊಲೀಸ್ ಕಸ್ಟಡಿಗೆ

Next Post

20 ಯೋಧರ ಹತ್ಯೆ: ಮಲಾಲಾ, ರಮ್ಯಾ ಎಂಬ ಶಾಂತಿದೂತೆಯರು ಎಲ್ಲಿ?

kalpa News

kalpa News

Next Post

20 ಯೋಧರ ಹತ್ಯೆ: ಮಲಾಲಾ, ರಮ್ಯಾ ಎಂಬ ಶಾಂತಿದೂತೆಯರು ಎಲ್ಲಿ?

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL