ಮುಂಬೈ, ಸೆ.7: ಗಣೇಶ ವಿಸರ್ಜನೆ ವೇಳೆ ಪೊಲೀಸ್ ಇನ್ಸ್ ಪೆಕ್ಟರ್ ನ್ನೇ ಹತ್ಯೆ ಮಾಡಲು ಯತ್ನಿಸಿರುವ ಘಟನೆ ನಡೆದಿದೆ.
ಗಣೇಶ ವಿಸರ್ಜನೆ ವೇಳೆ ಯಾವುದೇ ಅಹಿತಕರ ಘಟನೆ ನಡೆಸಬಾರದು ಹಾಗೂ ಶಿಸ್ತಿನಿಂದ ಇರುವಂತೆ ಸಬ್ಇನ್ ಸ್ಪೆಕ್ಟರ್ ನಿತಿನ್ ದಾಂಡು ದಾಗ್ಗಲೆ ಯುವಕರಿಗೆ ಎಚ್ಚರಿಕೆ ನೀಡಿದರು.
ಇದನ್ನೇ ದ್ವೇಷ ಸಾಧಿಸಿದ ಯುವಕರು ಪೊಲೀಸ್ ಸಮವಸ್ತ್ರದಲ್ಲಿದ್ದ ನಿತಿನ್ ದಾಗ್ಗಲೆ ಅವರನ್ನು ಎಳೆದು ಯುವಕನೊಬ್ಬ ನೀರಿನಲ್ಲಿ ಮುಳುಗಿಸಿ ಅದುಮಿದಾಗ ಪೊಲೀಸ್ ಜೀವ ಉಳಿಸಿಕೊಳ್ಳಲು ಒದ್ದಾಡುತ್ತಿರುವ ವಿಡಿಯೊ ದೃಶ್ಯ ಸಾಮಾಜಿಕ ತಾಣಗಳಲ್ಲಿ ಪ್ರಸಾರವಾಗಿದೆ.
ಯುವಕನಿಂದ ತಪ್ಪಿಸಿಕೊಂಡು ಮೇಲೆ ಬಂದ ನಂತರ ದಾಗ್ಗಲೆ ಮೇಲೆ ಇನ್ನೂ ಮೂವರು ಯುವಕರು ಹಲ್ಲೆ ನಡೆಸಿರುವುದು ವಿಡಿಯೋದಲ್ಲಿ ದಾಖಲಾಗಿದೆ.
ಅದೃಷ್ಟವಶಾತ್ ಕೋಲ್ಸ್ವಾಡಿ ಪೊಲೀಸ್ ಠಾಣೆ ಸಬ್ಇನ್ ಸ್ಪೆಕ್ಟರ್ ನಿತಿನ್ ದಾಂಡು (38) ಅಪಾಯದಿಂದ ಪಾರಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ.
ಈ ಸಂಬಂಧ ಕೋಲ್ಸ್ವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.
ಕಳೆದ 15 ದಿನಗಳಲ್ಲಿ ವಾಣಿಜ್ಯ ನಗರಿ ಮುಂಬೈನಲ್ಲಿ ಪುಂಡರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ 7 ಪ್ರಕರಣಗಳು ದಾಖಲಾಗಿದ್ದು, ಈ ಸಂಬಂಧ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿ ಮಾಡಿ ಚರ್ಚಿಸಿ ಆರೋಪಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ.














